ಕೊಲಂಬೋ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ. ಇದರ ಬೆನ್ನಲ್ಲೇ ಅಭಿಷೇಕ್ ಶರ್ಮಾ ಕೆಟ್ಟ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ.

ಕೊಲಂಬೋದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಭಾರತ ತಂಡವು ಎರಡು ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಭಾರತ ತಂಡದ ಪರ ಅಭಿಷೇಕ್ ಶರ್ಮಾ ಹಾಗೂ ಕುಲ್ದೀಪ್ ಯಾದವ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಪಾಕ್ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇನ್ನು ಟೀಂ ಇಂಡಿಯಾ ಕೂಡಿಕೊಂಡಿರುವ ಅಭಿಷೇಕ್ ಶರ್ಮಾ ಮತ್ತೊಮ್ಮೆ ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದಾರೆ.

ಇನ್ನು ಇದಷ್ಟೇ ಅಲ್ಲದೇ ಅಭಿಷೇಕ್ ಶರ್ಮಾ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಾನಾಡುತ್ತಿರುವ ಎರಡನೇ ಪಂದ್ಯದಲ್ಲೂ ಶೂನ್ಯ ಸುತ್ತುವ ಮೂಲಕ ಅತ್ಯಂತ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ. ಅಭಿಷೇಕ್ ಶರ್ಮಾ, ಯುಎಸ್ಎ ಎದುರಿನ ಪಂದ್ಯದಲ್ಲೂ ಶೂನ್ಯ ಸುತ್ತಿದ್ದರು.

ಇದೀಗ ಪಾಕ್ ನಾಯಕ ಸಲ್ಮಾನ್ ಅಲಿ ಅಘಾ ಎಸೆದ ಮೊದಲ ಓವರ್ನ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಶಾಹೀನ್ ಅಫ್ರಿದಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಈ ಮೂಲಕ ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಸತತ ಎರಡು ಪಂದ್ಯಗಳಲ್ಲಿ ಶೂನ್ಯ ಸುತ್ತಿದ ವಿಶ್ವದ ಮೊದಲ ಆರಂಭಿಕ ಬ್ಯಾಟರ್ ಹಾಗೂ ಒಟ್ಟಾರೆ ಮೂರನೇ ಕ್ರಿಕೆಟಿಗ ಎನ್ನುವ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮೊದಲು ಭಾರತದ ಆಶಿಶ್ ನೆಹ್ರಾ ಹಾಗೂ ಬಾಂಗ್ಲಾದೇಶದ ಇಮ್ರುಲ್ ಕಯೀಸ್ ತಾವಾಡಿದ ಚೊಚ್ಚಲ ಟಿ20 ವಿಶ್ವಕಪ್ನ ಮೊದಲ ಎರಡು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದರು. ಅಂದಹಾಗೆ ಈ ಇಬ್ಬರು ಕ್ರಿಕೆಟಿಗರು ಇದಾದ ಈ ಇಬ್ಬರು ಕ್ರಿಕೆಟಿಗರು ಟಿ20 ವಿಶ್ವಕಪ್ನಲ್ಲಿ ಒಂದೇ ಒಂದು ರನ್ ಬಾರಿಸಲು ಸಾಧ್ಯವಾಗಿರಲಿಲ್ಲ.

ಇನ್ನು ಅಭಿಷೇಕ್ ಶರ್ಮಾ ವಿಕೆಟ್ ಪತನದ ಹೊರತಾಗಿಯೂ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಭಾರತ 8 ಓವರ್ ಅಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 82 ರನ್ ಬಾರಿಸಿದೆ. ಇಶಾನ್ ಕಿಶನ್ 37 ಎಸೆತಗಳಲ್ಲಿ 72 ರನ್ ಸಿಡಿಸಿದರೆ, ತಿಲಕ್ ವರ್ಮಾ 10 ರನ್ ಬಾರಿಸಿ ಸಾಥ್ ಕೊಡುತ್ತಿದ್ದಾರೆ.

Source link
ಇಂಡೋ-ಪಾಕ್ ಮ್ಯಾಚ್: ಮತ್ತೆ ಶೂನ್ಯ ಸುತ್ತಿ ಕೆಟ್ಟ ದಾಖಲೆ ಬರೆದ ಅಭಿಷೇಕ್ ಶರ್ಮಾ!