
ಬೆಂಗಳೂರು: ತುಮಕೂರು ಕಡೆಯಿಂದ ಅತಿ ವೇಗವಾಗಿ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಾರಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ದುರ್ಗಾಪ್ರಸಾದ್(20), ಕೇಶವ್(19), ಲಲಿತ್(22) ಹರ್ಷಿತ್(20) ಮತ್ತು ಧನುಷ್(17) ಮೃತ ದುರ್ದೈವಿಗಳು.
ಶನಿವಾರ ರಾತ್ರಿ ಸುಮಾರು 11.30ಕ್ಕೆ ತುಮಕೂರು-ಬೆಂಗಳೂರು ಹೆದ್ದಾರಿಯ ಜಿಂದಾಲ್ ಆಸ್ಪತ್ರೆ ಸಮೀಪದ ಮೇಲ್ಸೇತುವೆಯಲ್ಲಿ ಈ ದುರ್ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ, ನಿರ್ವಾಹಕ ಹಾಗೂ ಆರು ಮಂದಿಗೆ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.