Headlines

VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ ‘ಒಳ’ಜಗಳ

VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ ‘ಒಳ’ಜಗಳ


ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್ ಭಾರತ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣವಾಗಿದ್ದು ಮೈದಾನದಲ್ಲಿನ ಭಾರತೀಯ ಆಟಗಾರರ ‘ಒಳ’ಜಗಳು.

ಪಾಕ್ ವಿರುದ್ಧದ ಪಂದ್ಯದ ಬಳಿಕ ಹಾರ್ದಿಕ್ ಪಾಂಡ್ಯ ಅವರು ಮೈದಾನದಲ್ಲೇ ಕುಲದೀಪ್ ಯಾದವ್ ಅವರೊಂದಿಗೆ ಚಕಮಕಿ ನಡೆಸುತ್ತಿರುವುದು ಕಂಡು ಬಂತು. ಈ ವೇಳೆ ಸಹ ಆಟಗಾರರು ಮಧ್ಯ ಪ್ರವೇಶಿಸುವ ಮೂಲಕ ಪರಿಸ್ಥಿತಿಯನ್ನು ತಿಳಿಯಪಡಿಸಿದರು.

ಇದರ ಬೆನ್ನಲ್ಲೇ ಪರಸ್ಪರ ಹಸ್ತಲಾಘವ ಮಾಡುವ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕುಲ್ದೀಪ್ ಯಾದವ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗಿದೆ. ಇಬ್ಬರು ಪರಸ್ಪರ ಅಪ್ಪಿಕೊಂಡರೂ ಕುಲದೀಪ್ ಯಾದವ್ ನಾಯಕನ ಮುಖ ನೋಡಿರಲಿಲ್ಲ.

ಅತ್ತ ಸೂರ್ಯಕುಮಾರ್ ಯಾದವ್ ಕೂಡ ಕುಲ್ದೀಪ್ ಯಾದವ್ರನ್ನು ತಳ್ಳುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡುಬಂದಿದೆ. ಇದೀಗ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದ 18ನೇ ತರಗತಿಯಲ್ಲಿ ಕುಲ್ದೀಪ್ ಯಾದವ್ ಸುಲಭ ಕ್ಯಾಚ್ ಕೈಚೆಲ್ಲಿದ್ದರು. ಇದೇ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ಕುಲದೀಪ್ ವಿರುದ್ಧ ಆಕ್ರೋಶ ಹೊರಹಾಕಿರುವ ಸಾಧ್ಯತೆಯಿದೆ. ಆದರೆ ಸೂರ್ಯಕುಮಾರ್ ಯಾದವ್ ಹಾಗೂ ಕುಲದೀಪ್ ನಡುವಣ ಒಳಜಗಳಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.



Source link

Leave a Reply

Your email address will not be published. Required fields are marked *