ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ
ಬೆಂಗಳೂರು, ಫೆಬ್ರವರಿ 16: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಖಡಕ್ ಕೌಂಟರ್ ಕೊಟ್ಟಿದೆ. ಕರಾವಳಿಯ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಸಚಿವರಿಗೆ ತಿವಿದಿದೆ. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಿಯಾಂಕ್, ಐಟಿ-ಬಿಟಿ ಕಂಪನಿಗಳಿಗೆ ಹೂಡಿಕೆ ಮಾಡಿ ಎಂದು ಹೇಳುತ್ತೇವೆ. ಆದರೆ ತಮ್ಮ ಕೆಲಸಗಾರರಿಗೆ ತೊಂದರೆ ಆದರೆ ಏನು ಕತೆ ಎಂಬ ಚಿಂತೆ ಅವರಿಗಿದೆ. ವರೆಗೆ ಧರ್ಮಗುರುಗಳು, ಎಲ್ಲಿಯ ರಾಜಕಾರಣಿಗಳು ಪ್ರಬುದ್ಧರಾಗಿ ಮಾತನಾಡಲ್ವೋ ಅಲ್ಲಿಯವರೆಗೂ ಸಮಾಜ ಉದ್ಧಾರ ಆಗಲ್ಲ. ಧರ್ಮದ ನಶೆ ಸೃಷ್ಟಿಸುವ ಕೆಲಸ ಮೊದಲು ನಿಲ್ಲಬೇಕು ಎಂದಿದ್ದರು. ಈ ವಿಚಾರವೀಗ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
‘ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ’
ಕರಾವಳಿಯ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ
ಕರಾವಳಿಯ ಮಣ್ಣಿನ ಮತ್ತು ಜನರ ಉದ್ಯಮಶೀಲತೆಯನ್ನು, ಪ್ರಗತಿಯನ್ನು, ತಮ್ಮ ಕೀಳು ರಾಜಕೀಯದ ಕಾಮಾಲೆ ಕಣ್ಣಿನಿಂದ ನೋಡದೆ, ವಾಸ್ತವ ನೆಲೆಗಟ್ಟಿನಲ್ಲಿ ಸಚಿವ ಶ್ರೀ. @ಪ್ರಿಯಾಂಕ್ ಖರ್ಗೆ ಅವರು ನೋಡಲಿ. ಕರಾವಳಿಗೆ… pic.twitter.com/H9KC5dBOOl
– ವಿಜಯೇಂದ್ರ ಯಡಿಯೂರಪ್ಪ (@BYVijayendra) ಫೆಬ್ರವರಿ 15, 2026
ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕಿಡಿ ಕಾರಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕರಾವಳಿಯ ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆ, ಪ್ರಗತಿ, ತಮ್ಮ ಕೀಳು ರಾಜಕೀಯದ ಕಾಮಾಲೆಯಿಂದ ನೋಡದೆ ವಾಸ್ತವ ನೆಲೆಗಟ್ಟಿನಲ್ಲಿ ಸಚಿವರು ನೋಡುತ್ತಾರೆ. ಕರಾವಳಿಗೆ ಕೋಮುವಾದದ ಹಣೆಪಟ್ಟಿ ಹಚ್ಚುವ ಅವರ ವ್ಯರ್ಥ ಪ್ರಯತ್ನ ಅವರ ರಾಜಕೀಯ ದಿವಾಳಿತನವನ್ನು ತೋರಿಸಿದೆ. ಕರಾವಳಿ ಕರ್ನಾಟಕ ತನ್ನ ಸ್ವಂತ ಶಕ್ತಿಯಿಂದ, IT-BT ಸೇರಿದಂತೆ ಶಿಕ್ಷಣ, ಬ್ಯಾಂಕಿಂಗ್ ಮತ್ತು ಉದ್ಯಮ ರಂಗದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಹೆಮ್ಮೆಯ ಕರಾವಳಿ ಜಿಲ್ಲೆಗಳ ಬಗ್ಗೆ ಅನಗತ್ಯವಾಗಿ ಬಂಡವಾಳ ಹೂಡಿಕೆದಾರರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರದ ಐಟಿ-ಬಿಟಿ ಸಚಿವರೇ ಮಾಡುತ್ತಿರುವುದು ದುರದೃಷ್ಟಕರ. ರಾಜ್ಯದ ಹಿತಬೇಕಾದ ಸಚಿವರು, ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸುವ ಮೂಲಕ ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿರುವುದು ಕರಾವಳಿಯವರಿಗೆ ಮಾಡುತ್ತಿರುವ ಅವಮಾನವೇ ಅಲ್ಲ, ತಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಸ್ಕೃತಿಯ ವ್ಯವಸ್ಥಿತ ಸಂಚು ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಕುರ್ಚಿ ಗುದ್ದಾಟದ ನಡುವೆ ನಾಳೆ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು!
ಇತ್ತೀಚೆಗೆ ನಿಮ್ಮ ಘನ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್ ಸಮಿತಿ ವರದಿ ನಿಮ್ಮ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ‘ಅತೀ ಹಿಂದುಳಿದ’ ಪಟ್ಟಿಯಲ್ಲಿದೆ, ಕರಾವಳಿಯು ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಲ್ಪಟ್ಟಿದೆ. ನಿಮ್ಮ ತವರು ಯುವಕ ಯುವತಿಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ವಿಫಲವಾಗಿದೆ ಮೊದಲು ನಿಮ್ಮ ಭಾಗದ ಅಭಿವೃದ್ಧಿಯತ್ತ ತುರ್ತು ಗಮನಹರಿಸಿ, ನಂತರ ಕರಾವಳಿಯ ಬಗ್ಗೆ ಮಾತನಾಡಿ. ಕರಾವಳಿಯ ಶಕ್ತಿಯ ಧರ್ಮ ಮತ್ತು ಕರ್ಮದ ಸಮನ್ವಯತೆ. ಸುಮ್ಮನೆ ಅದನ್ನು ಕೆಣಕುವ ಬದಲು, ನಿಮ್ಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸಿ ಎಂದು ಕೌಂಟರ್ ಕೊಟ್ಟಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.