ಕೊಪ್ಪಳ: ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆಗೆ ಶರಣು, ಕಾರಣ?

ಕೊಪ್ಪಳ: ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆಗೆ ಶರಣು, ಕಾರಣ?


ಕೊಪ್ಪಳ, ಫೆಬ್ರವರಿ 16: ಗ್ರಾಮ ಪಂಚಾಯತ್ ಡಿ ಗ್ರೂಪ್ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (ಆತ್ಮಹತ್ಯೆ) ಮಾಡಿಕೊಂಡಿರುವಂತಹ ಘಟನೆ ಕೊಪ್ಪಳ (ಕೊಪ್ಪಳ) ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ನಡೆದಿದೆ. ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿಕೊಂಡ ನೌಕರ. ಇಂದು ನಸುಕಿನ ಜಾವ ನೇಣುಬಿಗಿದುಕೊಂಡು ಗ್ರಾಮ ಪಂಚಾಯತ್ ನಲ್ಲೇ ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ

ರಮೇಶ್ ವೈಯಕ್ತಿಕ ಕಾರಣದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಕಳೆದ ಕೆಲದಿನಗಳಿಂದ ಸಹೋದರಿಯರು ಗಲಾಟೆ ಮಾಡುತ್ತಿದ್ದಾರೆ. ಹೀಗಾಗಿ ಆಸ್ತಿ ವಿಚಾರವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನಿನ್ನೆ ಇದೇ ವಿಚಾರಕ್ಕೆ ಗಲಾಟೆ, ಇಂದು ನಸುಕಿನ ಜಾವ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ರಮೇಶ್ ಆತ್ಮಹತ್ಯೆ ಹಿನ್ನೆಲೆ ಅವರ ಸಹೋದರಿ ಸೇರಿ ಐದಕ್ಕೂ ಹೆಚ್ಚು ಜನರ ವಿರುದ್ಧ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಸ್ವಸ್ಥ ನಾಲ್ವರು ಗುತ್ತಿಗೆ ನೌಕರರಿಗೆ ಖಾಸಗಿ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಪ್ರಕರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ನಾಲ್ವರು ಗುತ್ತಿಗೆ ನೌಕರರಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಡಿಹೆಚ್ಒ ಮಂಜುನಾಥ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ತಗುಲಿದೆ ದೊಡ್ಡ ರೋಗ! ಹೆಚ್ಚಿದ ಭ್ರಷ್ಟಾಚಾರ, 4 ತಿಂಗಳಿಂದ ಗುತ್ತಿಗೆ ನೌಕರರಿಗೆ ವೇತನ

ಹಳೇ ನೌಕರರನ್ನೇ ಮುಂದುವರಿಸುವುದಾಗಿ ಡಿಹೆಚ್ ಒ ಭರವಸೆ ನೀಡಿದ್ದು, ಈ ವೇಳೆ ದಲಿತ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಮಧ್ಯೆ ಮಧ್ಯೆ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಮಧ್ಯ ಪ್ರವೇಶಿಸಿದ ಪರಿಸ್ಥಿತಿ ತಿಳಿಗೊಳಿಸಿದರು.

ಘಟನೆ ಹಿನ್ನೆಲೆ

ಜಮಖಂಡಿಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರ್ ಕೆಲಸ ಗುತ್ತಿಗೆ ನೌಕರರ ಕೆಲಸ ತೆಗೆಯಲು ಮುಂದಾಗಿದ್ದ ವೇಳೆ ಮೈಮೇಲೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ನಡೆದಿದೆ. ಘಟನೆ ವೇಳೆ ಬಾಯಿಯೊಳಗೆ ಪೆಟ್ರೋಲ್ ಹೋಗುವಾಗ ಅಸ್ವಸ್ಥಗೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 10:33 pm, ಸೋಮ, 16 ಫೆಬ್ರವರಿ 26



Source link

Leave a Reply

Your email address will not be published. Required fields are marked *