ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು?

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು?


ಕನ್ನಡದ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದ ಘಟನೆ ಇದಾಗಿದ್ದರೆ, ಸಂಬಂಧ ಸಂತ್ರಸ್ತ ದೂರು ದಾಖಲು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿ ಕೃತ್ಯ ನಡೆಸಿದ್ದು, ಆತನಿಗಾಗಿ ಈ ಹುಡುಕಾಟ ಮುಂದುವರಿದಿದೆ.

ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕ್ರಿಕೆಟ್ ಪಂದ್ಯ ನಡೆದಿತ್ತು. ಎರಡನೇ ದಿನ ವಾಶ್ ರೂಂ ಹೋದಾಗ ಎದುರಾದ ಅಪರಿಚಿತ ವ್ಯಕ್ತಿ ವಿಡಿಯೋ ರೆಕಾರ್ಡ್ ಮತ್ತು ಫೋಟೋ ತೆಗೆದಿದ್ದ. ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದಲೇ ಫೋಟೋ ವಿಡಿಯೊ ರೆಕಾರ್ಡ್ ಮಾಡಿದೆ ಎಂಬ ಆರೋಪವನ್ನು ಮಾಡಲಾಗಿದೆ.

ಸಾಮಾನ್ಯವಾಗಿ ವಿಡಿಯೋ ಮಾಡಿದವರು ಅವರಿಗೆ ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಾರೆ. ಆದರೆ, ಇಲ್ಲಿ ಆಗಿದ್ದೆ ಬೇರೆ. ವಿಡಿಯೋ ರೆಕಾರ್ಡ್ ಮಾಡಿ ಯುವತಿಗೆ ಕಳುಹಿಸಿದ್ದಾಳೆ ಆಕೆ ಆಪ್ತ ಸ್ನೇಹಿತೆಗೆ ಕಳುಹಿಸಿದ್ದ. ‘Swan.3704722’ ಇನ್ಸ್ಟಾ ಅಕೌಂಟ್‌ನಿಂದ ಸಂದೇಶ ಕಳುಹಿಸಲಾಗಿದೆ.

ಇದನ್ನೂ ಓದಿ: ‘ಯಾರ ಜೊತೆ ಬೇಕಾದರೂ ಹೋಗಿ ಮಲಗು’: ಕನ್ನಡದ ನಟಿಗೆ ಗಂಡನಿಂದ ಕಿರುಕುಳ

‘ವಿಡಿಯೋ ವೈರಲ್ ಆಗಬಾರದೆಂದರೆ ಹಣ ಕೊಡಬೇಕು’ ಎಂದು ಅಪರಿಚಿತ ಬೆದರಿಕೆ ಹಾಕಿದ್ದ. ವೀಡಿಯೋ ಕಾಲ್ ಮಾಡಿಯೂ ಬೆದರಿಕೆ ಹಾಕಿದ್ದ. ಸದ್ಯ ಆತ ಕಳಿಸಿರುವ ಪೊಟೋಸ್, ವಿಡಿಯೋಗಳನ್ನ ನೀಡಿ ನಟಿ ದೂರು ನೀಡಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಸದ್ಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *