
ಮೈಸೂರು, ಫೆಬ್ರವರಿ 18: ನಗರ ಸಂಚಾರಿ ದೋಷಪೂರಿತ ಬೈಕ್ ಸೈಲೆನ್ಸರ್ ವಿರುದ್ಧ ವಿನೂತನ ರೀತಿಯಲ್ಲಿ ಸಮರ ಸಾರಿದೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಮತ್ತು ಅತಿಯಾದ ಶಬ್ದ ಮಾಲಿನ್ಯಕ್ಕೆ ಕಾರಣವಾದ ಇಂತಹ ಸೈಲೆನ್ಸರ್‌ಗಳನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದೆ. ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ, ಕರ್ಕಶವಾಗಿ ಸದ್ದು ಮಾಡುತ್ತಾ ಜನರಿಗೆ ತೊಂದರೆ ನೀಡುತ್ತಿದ್ದ 378 ದ್ವಿಚಕ್ರ ವಾಹನಗಳನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬೈಕ್‌ಗಳಲ್ಲಿ ಅಳವಡಿಸಲಾಗಿದ್ದ ದೋಷಪೂರಿತ ಸೈಲೆನ್ಸರ್‌ಗಳು, ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಶಾಂತಿ ಭಂಗ ತರುತ್ತಿದ್ದವು. ಈ ಎಲ್ಲಾ ಸೈಲೆನ್ಸರ್‌ಗಳನ್ನು ವಶಪಡಿಸಿಕೊಂಡು ರೋಡ್ ರೋಲರ್ ಹತ್ತಿಸುವ ಮೂಲಕ ಸಂಪೂರ್ಣವಾಗಿ ನಾಶಪಡಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.