Headlines

ಬೆಂಕಿ ಹೊತ್ತಿಕೊಂಡು ಧಗಧಗಿಸಿದ ಖಾಸಗಿ ಬಸ್​​: ಅಕ್ಕ ಪಕ್ಕದಲ್ಲಿದ್ದ ವಾಹನಗಳಿಗೂ ಹಾನಿ

ಬೆಂಕಿ ಹೊತ್ತಿಕೊಂಡು ಧಗಧಗಿಸಿದ ಖಾಸಗಿ ಬಸ್​​: ಅಕ್ಕ ಪಕ್ಕದಲ್ಲಿದ್ದ ವಾಹನಗಳಿಗೂ ಹಾನಿ


ಬೆಂಗಳೂರು, ಫೆಬ್ರವರಿ 18: ನಗರದ ಚಂದ್ರಾಲೇಟ್ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್ ವೊಂದು ಹೊತ್ತಿ ಉರಿದಿದೆ. ಘಟನೆಯಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಾಗಿತ್ತು, ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಬೆಂಕಿಯ ಜ್ವಾಲೆ ಬಸ್‌ನ ಅಕ್ಕಪಕ್ಕ ನಿಲ್ಲಿಸಿದ್ದ ಇತರ ವಾಹನಗಳಿಗೆ ಹಬ್ಬಿ, ಅವಕ್ಕೂ ಹಾನಿಯಾಗಿವೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಹೊತ್ತಿ ಉರಿಯಲು ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಪ್ರದರ್ಶನ, ಡೀಸೆಲ್ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಥವಾ ಕಿಡಿಗೇಡಿಗಳ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *