ಮೃತ ದೇವಿಕಾ ಮತ್ತು ಆರೋಪಿ ಕುಮಾರ್ಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಬೆಂಗಳೂರು, ಫೆಬ್ರವರಿ 18: ಪತ್ನಿ ಮೇಲೆ ಅನುಮಾನ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಆಕೆಯನ್ನು ಪತಿಯೇ ಬರ್ಬರವಾಗಿ ಹತ್ಯೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ಘಟನೆ ನಡೆದಿದೆ. ದೇವಿಕಾ(50) ಮೃತರಾಗಿದ್ದರೆ, ಆರೋಪಿ ಕುಮಾರ್ ಅವರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದ ವೇಳೆ ದೇವಿಕಾ ಚಾಲಕನ ಜೊತೆ ಮಾತನಾಡಿದ್ದರು. ಇದರಿಂದ ಅನುಮಾನಗೊಂಡ ಕುಮಾರ್, ನಿನ್ನೆ ರಾತ್ರಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಕೂಡಲೇ ಆತನನ್ನ ಮಕ್ಕಳು ತಡೆದಿದ್ದಾರೆ.
ಇನ್ನು ಘಟನೆ ಬಗ್ಗೆ ದೇವಿ ಮತ್ತು ಕುಮಾರ್ ಪುತ್ರಿ ಶಾಲಿನಿ ಹೇಳಿದ್ದು, ನಮ್ಮ ತಂದೆ ತಾಯಿ ಮದುವೆ ಆಗಿ 40 ವರ್ಷ ಆಗಿದೆ. ಈ ಮೊದಲು ನಮ್ಮ ತಂದೆ ಈ ರೀತಿ ಇರಲಿಲ್ಲ. ಕಳೆದ ಒಂದು ತಿಂಗಳಿಂದ ಅನುಮಾನ ಅಂತ ಶುರು ಮಾಡಿದೆ. ಮಲಗಿದ್ದಾಗಲೇ ನಮ್ಮ ತಾಯಿಯನ್ನ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಪರಿಸ್ಥಿತಿ ಯಾರಿಗೂ ಬರಬಾರದು. ಕೊಲೆ ಮಾಡಿದ ಬಳಿಕ ಆತ ನಮ್ಮ ತಮ್ಮನಿಗೆ ಫೋನ್ ಮಾಡಿ ನಿಮ್ಮ ತಾಯಿಯನ್ನ ಕೊಂದಿದ್ದೀನಿ ಎಂದು ಹೇಳಿದ್ದಾನೆ. ಜೊತೆಗೆ, ತಾನು ಕೂಡ ನೇಣು ಹಾಕಿಕೊಳ್ತೇನೆ ಬನ್ನಿ ಎಂದಿದ್ದಾನೆ. ಹೀಗಾಗಿ ವಿಚಾರ ಪೊಲೀಸರಿಗೆ ತಿಳಿಸಿ ಕೂಡಲೇ ಸ್ಥಳಕ್ಕೆ ಹೋಗಲಾಗಿದೆ. ನಮಗೆ ತಂದೆ ಬೇಡ. ಜಾಮೀನು ಎಂದು ನಾವೇನೂ ಹೋಗಲ್ಲ ಎಂದು ಶಾಲಿನಿ ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿ: ಪ್ರೇಯಸಿಯ ಕೊಂಡು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು?
ಸದ್ಯ ಕೊಲೆ ಆರೋಪಿ ಕುಮಾರ್ ಅವರನ್ನು ಬಂಧಿಸಿದ್ದು, ಘಟನೆ ಬಗ್ಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 4 ಕಾಲ ಜೊತೆಯಾಗಿ ಸಂಸಾರ ನಡೆಸಿದ್ದ ದೇವಿಕಾ ಮತ್ತು ಕುಮಾರ್ ದಾಂಪತ್ಯ ದುರಂತ ಅಂತ್ಯ ಕಂಡಿದ್ದು, ಆರೋಪಿ ಕುಮಾರ್ ಅದ್ಯಾಕೆ ತನ್ನ ಹೆಂಡತಿಯ ಮೇಲೆ ವಿಪರೀತ ಅನುಮಾನ ಹೊಂದಿದ್ದ ಎಂಬುದು ತನಿಖೆಯಿಂದ ಬಯಲಾಗಿದೆ. ತಂದೆಯ ವರ್ತನೆಯಿಂದ ಮಕ್ಕಳೂ ಬೆಚ್ಚಿಬಿದ್ದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.