
<p>ಇಂಡಿಯಾ-ಇಂಗ್ಲೆಂಡ್ ಟೆಸ್ಟ್ ಸರಣಿ ರೋಚಕ ಘಟ್ಟ ತಲುಪಿದೆ. 2-1 ಅಂತರದಲ್ಲಿ ಇಂಗ್ಲೆಂಡ್ ಮುಂದಿದೆ. ನಿರ್ಣಾಯಕ ನಾಲ್ಕನೇ ಟೆಸ್ಟ್‌ಗೆ ಟೀಮ್ ಇಂಡಿಯಾದಲ್ಲಿ ಬದಲಾವಣೆಗಳು ಅನಿವಾರ್ಯ. ಈ ಆಟಗಾರನಿಗೆ ನಾಲ್ಕನೇ ಟೆಸ್ಟ್ ಪಂದ್ಯದಿಂದ ಗೇಟ್‌ಪಾಸ್ ಸಿಗುವ ಸಾಧ್ಯತೆಯಿದೆ.</p><img><p>’ಕ್ರಿಕೆಟ್, ನನಗೊಂದು ಚಾನ್ಸ್ ಕೊಡು’ ಅಂತ ಕರುಣ್ ನಾಯರ್ ಕೇಳಿಕೊಂಡಿದ್ದು ಎಲ್ಲರನ್ನೂ ಭಾವುಕರನ್ನಾಗಿಸಿತ್ತು. ಅವರಿಗೆ ಮತ್ತೊಂದು ಅವಕಾಶ ಸಿಕ್ಕಿತು. ಆದರೆ ಅದನ್ನು ಸದುಪಯೋಗಪಡಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಈಗ ಅವರನ್ನು ತಂಡದಿಂದ ಕೈಬಿಡಬೇಕೆಂಬ ಕೂಗು ಕೇಳಿಬರುತ್ತಿದೆ.</p><img>ಇಂಗ್ಲೆಂಡ್ ಪ್ರವಾಸದಲ್ಲಿ ಕರುಣ್ ನಾಯರ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ ನೂರು ರನ್ ಗಳಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಕಷ್ಟ.<img>ಲಾರ್ಡ್ಸ್ ಟೆಸ್ಟ್‌ನಲ್ಲಿ ಭಾರತ ಸೋಲಿಗೆ ಬ್ಯಾಟ್ಸ್‌ಮನ್‌ಗಳ ವೈಫಲ್ಯವೇ ಕಾರಣ. ಕರುಣ್ ನಾಯರ್ ಕೂಡ ರನ್ ಗಳಿಸಲು ವಿಫಲರಾದರು. ಮುಂದಿನ ಪಂದ್ಯದಲ್ಲಿ ಸಾಯಿ ಸುದರ್ಶನ್ ಅಥವಾ ಅಭಿಮನ್ಯು ಈಶ್ವರನ್ ಅವಕಾಶ ಪಡೆಯಬಹುದು.<img><p>ಮ್ಯಾಂಚೆಸ್ಟರ್ ಟೆಸ್ಟ್‌ಗೆ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ರಿಷಭ್ ಪಂತ್ ಗಾಯಗೊಂಡಿದ್ದು, ಅವರು ಆಡುವುದು ಅನುಮಾನ ಎನ್ನಲಾಗುತ್ತಿದೆ.</p><img>ಜಸ್ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್‌ಗೆ ದೂರ ಉಳಿಯುವ ಸಾಧ್ಯತೆಯಿದೆ. ಅವರಿಗೆ ವಿಶ್ರಾಂತಿ ನೀಡಬಹುದು.
Source link
ಲಾರ್ಡ್ಸ್ ಟೆಸ್ಟ್ ಸೋಲಿನ ಬೆನ್ನಲ್ಲೇ ಈ ಕ್ರಿಕೆಟಿಗನಿಗೆ ಟೀಂ ಇಂಡಿಯಾದಿಂದ ಗೇಟ್‌ಪಾಸ್?