ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಸಿಎ ನಿವೇಶನಗಳ ಹಂಚಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಸಿಎ ನಿವೇಶನಗಳ ಹಂಚಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ


ಕೇಂದ್ರ ಸಚಿವ ಪ್ರಲ್ಹಾದ ಜೋಶಿಚಿತ್ರದ ಕ್ರೆಡಿಟ್ ಮೂಲ: ಗೂಗಲ್

ಹೊಸ, ಫೆಬ್ರವರಿ 18: ನಾಗರಿಕರಿಗೆ ಮೂಲಸೌಕರ್ಯ ಒದಗಿಸಬೇಕಾದ 24ಕ್ಕೂ ಹೆಚ್ಚು ನಿವೇಶನಗಳು ಕಾಂಗ್ರೆಸ್ ಕಚೇರಿಗಳಿಗೆ ಉಪಯೋಗ ಅದೇನು ಕಾಂಗ್ರೆಸ್ ಪಿತ್ರಾರ್ಜಿತ ಆಸ್ತಿಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೆಂಡ ಕಾರಿದ್ದಾರೆ. ರಾಜ್ಯದಲ್ಲಿ ನಾಗರಿಕ ಸೌಲಭ್ಯದ(CA) ನಿವೇಶನಗಳನ್ನು ಕಡಿಮೆ ಬೆಲೆಗೆ, ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ಹಂಚಿಕೆ ಮಾಡಿರುವುದು ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಎಂದು ಅವರು ಆರೋಪಿಸಿದ್ದಾರೆ.

‘ಸಾರ್ವಜನಿಕ ಆಸ್ತಿ ಕಬಳಿಕೆ’

ಪ್ರಲ್ಹಾದ್ ಜೋಶಿ ಎಕ್ಸ್ ಪೋಸ್ಟ್

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಕ್ಸ್ ಪೋಸ್ಟ್

ಸಾರ್ವಜನಿಕ ಉದ್ಯಾನವನ, ಗ್ರಂಥಾಲಯ, ಆಸ್ಪತ್ರೆಗಳಿಗೆ ಬಳಕೆ ಆಗಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಭೂಮಿಯನ್ನು ‘ಕಾಂಗ್ರೆಸ್ ಭವನ’ಕ್ಕೆ ಮೀಸಲಿಟ್ಟಿರುವುದು ರಾಜ್ಯದ ಜನತೆಗೆ ಮಾಡಿದ ದ್ರೋಹ . ಒಂದೆಡೆ ಬಡವರಿಗೆ ನಿವೇಶನ ನೀಡಲು ಜಾಗವಿಲ್ಲ ಎನ್ನುವ ಈ ಕಾಂಗ್ರೆಸ್ ಸರ್ಕಾರ, ಇನ್ನೊಂದೆಡೆ ತನ್ನ ಪಕ್ಷದ ಕಚೇರಿಗಳಿಗೆ ಬಳಸಿಕೊಳ್ಳುತ್ತಿದೆ. ಈ ಮೂಲಕ ಸಾರ್ವಜನಿಕ ಆಸ್ತಿಯನ್ನು ಕಬಳಿಸುತ್ತಿದೆ. ರಾಜ್ಯದ ಸಾರ್ವಜನಿಕ ಆಸ್ತಿಯನ್ನು ಕಾಂಗ್ರೆಸ್ ಪಕ್ಷ ತನ್ನ ಪಿತ್ರಾರ್ಜಿತ ಆಸ್ತಿ ಎಂಬಂತೆ ಬಳಸಿಕೊಳ್ಳುತ್ತಿದೆ, ಬಡವರ ಹಿತ ಕಾಯುವ ಬದಲು ಕಾಂಗ್ರೆಸ್ ತನ್ನ ‘ಪಕ್ಷದ ಹಿತ’ಕ್ಕೆ ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದೆ ಎಂದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸೈಟ್ ಬಳಕೆ; ದೆಹಲಿಯಲ್ಲೂ ಸದ್ದು ಮಾಡಿದ ವಿವಾದ

ಹೋರಾಟದ ಎಚ್ಚರಿಕೆ

ಲೂಟಿ ಹೊಡೆಯುವ ಮೂಲ ಸಿದ್ಧಾಂತವು ಮತ್ತೊಮ್ಮೆ ಕಾಂಗ್ರೆಸ್ ಆಗಿದೆ ಎಂದಿರುವ ಜೋಶಿ, ಪಕ್ಷದ ಕಚೇರಿಗಳಿಗೆ ಈ ಅಕ್ರಮ ಹಂಚಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಹಿಂಪಡೆದಿದೆ. ಇಲ್ಲದಿದ್ದರೆ ಬಿಜೆಪಿ ಬೃಹತ್ ಹೋರಾಟವಿದೆ ಎಂದು ಅವರು ಇದೇ ವೇಳೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *