
ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ಬಿಳಿ ಹೂವಿನಿಂದ ಕಟ್ಟಿದ ಮಾಲೆಯನ್ನು ದೇವಿಗೆ ಅರ್ಪಿಸುವುದರಿಂದ ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸ- ಕಾರ್ಯಗಳು ಪೂರ್ಣಗೊಳ್ಳಲಿವೆ. ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಹಣ ಹಾಕಲಾಗಿದೆ ಅಂತಾದಲ್ಲಿ ಅದನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮೂಡಲಿದೆ. ಮನೆಯಲ್ಲಿ ಮಾಡಬೇಕಾದ ಕೆಲಸಗಳು ಇದ್ದಲ್ಲಿ ಅದರ ಬಗ್ಗೆ ಯಾರನ್ನು ಕರೆಸಿ ಮಾತುಕತೆಗೆ ಮುಂದಾಗುತ್ತೀರಿ. ಅದೇ ರೀತಿ ಮನೆಯಲ್ಲಿ ಇರುವ ಹಾಗೂ ಸದ್ಯಕ್ಕೆ ಬಳಕೆ ಮಾಡದಿರುವ ಕೆಲವು ವಸ್ತುಗಳ ಮಾರಾಟ ಮಾಡುವ ಯೋಗ ಕೂಡ ಇದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ವಿದೇಶದಲ್ಲಿ ವ್ಯಾಸಂಗ/ ಉದ್ಯೋಗ ಮಾಡಬೇಕೆಂದು ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಹೋಟೆಲ್ ಉದ್ಯಮವನ್ನು ನಡೆಸುತ್ತಿರುವವರಿಗೆ ವಿಸ್ತರಣೆ ಬಗ್ಗೆ ಆಲೋಚನೆ ಬರಲಿದೆ. ಇನ್ನು ಬ್ಯಾಂಕ್ ಅಥವಾ ಬ್ಯಾಂಕೇತರ ಸಂಸ್ಥೆಗಳಿಂದ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿದೆ ಅಂತಾ ಇಲ್ಲಿಯವರೆಗೆ ನಾನಾ ಕಾರಣಗಳಿಂದ ವಿಳಂಬವಾಗುತ್ತಿರುವ ಪ್ರಕ್ರಿಯೆಗೆ ವೇಗ ದೊರೆಯಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಹೊಸ ಕಾರು ಖರೀದಿಸಬೇಕು ಎಂದುಕೊಳ್ಳುತ್ತಿರುವವರು ಅಲ್ಲಿಂದ ಮುಂದಿನ ಹಂತಕ್ಕೆ ಉದ್ದೇಶವನ್ನು ಒಯ್ಯುವ ಯೋಗ ಇದೆ. ಕ್ರೆಡಿಟ್ ಕಾರ್ಡ್ ಬಳಸುವವರು ಖರ್ಚಿನ ಮೇಲೆ ಹತೋಟಿ ಇರಿಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ನಿಮಗೆ ಅಗತ್ಯ ಇಲ್ಲದ ವಸ್ತುಗಳನ್ನು ಖರೀದಿಸಲು ಹೋಗಬೇಡಿ. ನಿಮ್ಮಲ್ಲಿ ಕೆಲವರು ಹಳೇ ಆಸ್ತಿ ವ್ಯಾಜ್ಯಗಳು ಸಂಧಾನದ ಮೂಲಕ ಪರಿಹರಿಸಲು ಪ್ರಯತ್ನ ಮಾಡಿದರೂ ಅದು ಪತ್ತೆಯಾಗದಿರುವುದು ಖಚಿತ.
ಲೇಖನ- ಸ್ವಾತಿ ಎನ್.ಕೆ.