ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಕೆನ್ನಾಲಿಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೆ ಹರಡುವ ಸಾಧ್ಯತೆಯಿದೆ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ಪ್ರಕರಣಕ್ಕೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಲ್ದಾಣದ ಪಾರ್ಕಿಂಗ್‌ನಲ್ಲಿ ಇಂತಹ ಅಗ್ನಿ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ