ಬೆಂಗಳೂರು, ಫೆಬ್ರವರಿ 19: ಮೆಜೆಸ್ಟಿಕ್ ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಬಸ್ ಟಿಕೆಟ್ ಮೆಷಿನ್ ನನ್ನನ್ನೇ ಕದ್ದೊಯ್ದ ಘಟನೆ ನಡೆದಿದೆ. ಬೆಂಗಳೂರು-ಶಿರಸಿ ಮಾರ್ಗದ ನ್ಯಾನ್-ಎಸಿ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ಬ್ಯಾಗ್‌ನಲ್ಲಿದ್ದ ಟಿಕೆಟ್ ಮೆಷಿನ್ತನವಾಗಿದೆ. ಕೃತ್ಯದಿಂದಾಗಿ ಮೆಜೆಸ್ಟಿಕ್ ನಿಲ್ದಾಣದಲ್ಲಿ ಬಸ್ ಎರಡು ಗಂಟೆಗಳ ಕಾಲ ನಿಂತಲ್ಲೇ ನಿಂತಿದ್ದು, ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಂತಿಮವಾಗಿ ಸಿಬ್ಬಂದಿ ಮ್ಯಾನುವಲ್ ಟಿಕೆಟ್ ನೀಡಿ ಬಸ್ ಸೇವೆ ಆರಂಭಿಸಿದ್ದಾರೆ. ಖದೀಮರು ಬ್ಯಾಗ್ ಕದ್ದೊಯ್ಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ, ಈ ದೃಶ್ಯಾವಳಿಗಳು ಟಿವಿ9ಗೆ ಲಭ್ಯವಿವೆ. ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಪ್ರದೀಪ್, ಟಿವಿ9 ಬೆಂಗಳೂರು
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.