ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ
ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಚಿಕಿತ್ಸೆ ನಡೆಯುತ್ತಿದೆ.
ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಯ ರಾಯಚೂರು ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಹೂಡಿದ್ದರು. ಈ ವೇಳೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅವರು ಕೂಡಲೇ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳಿಗೆ ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ನ ಟಿಕೆಟ್ ಮೆಷಿನ್ ನನ್ನನ್ನೇ ಕದ್ದೊಯ್ದ ಕಳ್ಳ!
ಶ್ರೀಗಳ ಆರೋಗ್ಯ ಹದಗೆಟ್ಟ ಸುದ್ದಿ ತಿಳಿಯದಂತೆ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಭಕ್ತರು ಮತ್ತು ಅನುಯಾಯಿಗಳಲ್ಲಿ ಆತಂಕ ಮೂಡಿದೆ. ಶ್ರೀಗಳು ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ