ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಲಿನ ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಇದೀಗ ಸೂಪರ್-8 ಹಂತದ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇದೀಗ ಭಾರತ ಸೂಪರ್-8 ಹಂತದಲ್ಲಿ ಯಾವಾಗ? ಯಾವ ತಂಡವನ್ನು ಎದುರಿಸಲಿದೆ ಎನ್ನುವುದನ್ನು ನೋಡೋಣ ಬನ್ನಿ

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ‘ಎ’ ಗುಂಪಿನಲ್ಲಿ ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಅಗ್ರಸ್ಥಾನಿಯಾಗಿ ಸೂಪರ್-8 ಹಂತಕ್ಕೆ ಲಗ್ಗೆಯಿಟ್ಟಿದೆ. ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ, ನೆದರ್ಲೆಂಡ್ಸ್ ಎದುರು 17 ರನ್ ಅಂತದ ಭರ್ಜರಿ ಗೆಲುವು ದಾಖಲಿಸಿದೆ.

ಟೀಂ ಇಂಡಿಯಾ, ಗ್ರೂಪ್ ಹಂತದ ಮೊದಲ ಪಂದ್ಯದಲ್ಲಿ ಯುಎಸ್ಎ ಎದುರು ಗೆಲ್ಲುವ ಮೂಲಕ ಶುಭಾರಂಭ ಮಾಡಿತ್ತು. ಇದಾದ ಬಳಿಕ ನಮೀಬಿಯಾ ಎದುರು 93 ರನ್ಗಳ ಭಾರೀ ಅಂತರದ ಗೆಲುವು ದಾಖಲಿಸಿತ್ತು. ಇನ್ನು ಬದ್ದ ಎದುರಾಳಿ ಪಾಕಿಸ್ತಾನವನ್ನು ಸೂರ್ಯ ಪಡೆ 61 ರನ್ಗಳಿಂದ ಮಣಿಸಿತ್ತು. ಇದೀಗ ನೆದರ್ಲೆಂಡ್ಸ್ ಕೂಡಾ ಭಾರತದ ಎದುರು ಮಂಡಿಯೂರಿದೆ.

ಅಂದಹಾಗೆ ಇದೀಗ ಸೂಪರ್-8 ಹಂತದಲ್ಲಿ ಭಾರತಕ್ಕೆ ಮೊದಲ ಪಂದ್ಯದಲ್ಲೇ ಕಠಿಣ ಸವಾಲು ಎದುರಾಗಲಿದೆ. ಭಾರತವು ಸೂಪರ್-8 ಹಂತದ ಮೊದಲ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಫೆಬ್ರವರಿ 22ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದಾದ ಬಳಿಕ ಭಾರತ ತನ್ನ ಪಾಲಿನ ಸೂಪರ್-8 ಹಂತದ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಫೆಬ್ರವರಿ 26ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿದೆ. ಮಾಜಿ ಚಾಂಪಿಯನ್ ಆಸ್ಟ್ರೇಲಿಯಾವನ್ನೇ ಸೋಲಿಸಿರುವ ಜಿಂಬಾಬ್ವೆಯನ್ನು ಸುಲಭವಾಗಿ ತೆಗೆದುಕೊಳ್ಳುವಂತಿಲ್ಲ.

ಇನ್ನು ಸೂಪರ್-8 ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡವು ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 01ರಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನವನ್ನು ಎದುರಿಸಲಿದೆ.

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿವೆ. ಈ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದು. ಭಾರತ ಆಡಲಿರುವ ಮೂರು ಪಂದ್ಯಗಳ ಪೈಕಿ ಕನಿಷ್ಠ ಎರಡು ಪಂದ್ಯಗಳನ್ನು ಜಯಿಸಿದರೆ ಸೆಮಿಫೈನಲ್ಗೆ ಎಂಟ್ರಿಕೊಡಲಿದೆ.

Source link
T20 World Cup 2026: ಸೂಪರ್-8ನಲ್ಲಿ ಭಾರತದ ಎದುರಾಳಿಗಳು ಯಾರು? ಮೊದಲ ಪಂದ್ಯ ಎಲ್ಲಿ? ಯಾವಾಗ? ಸಂಪೂರ್ಣ ವೇಳಾಪಟ್ಟಿ