Headlines

ಕಾಲುವೆ ನಿರ್ಮಾಣಕ್ಕಾಗಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ

ಕಾಲುವೆ ನಿರ್ಮಾಣಕ್ಕಾಗಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ


ಆಲಮಟ್ಟಿ ಫೆ.19: ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕಾಲುವೆ ನಿರ್ಮಾಣಕ್ಕೆ ಜಮೀನು ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ವಿಜಯಪುರದ 1ನೇ ಹೆಚ್ಚುವರಿ ನ್ಯಾಯಾಲಯದ ಆದೇಶದಂತೆ ಕೃಷ್ಣಾ ಭಾಗ್ಯ ಜಲ ನಿಗಮದ (ಕೆಬಿಜೆಎನ್‌ಎಲ್) ವ್ಯವಸ್ಥಾಪಕ ನಿರ್ದೇಶಕರ (ಎಂಡಿ) ಕಚೇರಿಯನ್ನು ಜಪ್ತಿ ಮಾಡಲಾಯಿತು. ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ರೈತ ಮಹಾದೇವ ಲಿಗಾಡೆ ಹಾಗೂ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಅಕ್ರುಸಾಬ ಮುಲ್ಲಾ ಸೇರಿದಂತೆ ಹಲವಾರು ರೈತರ ಜಮೀನನ್ನು ಕಾಲುವೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಆದರೆ, ವರ್ಷಗಳು ಕಳೆದರೂ ಸರ್ಕಾರ ಹಾಗೂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ನ್ಯಾಯದಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ನೀಡಿದ್ದ ಗಡುವನ್ನು ಅಧಿಕಾರಿಗಳು ಪದೇ ಪದೇ ಉಲ್ಲಂಘಿಸಿದ ಕಾರಣ, ಇಂದು ಆಲಮಟ್ಟಿಯಲ್ಲಿರುವ ಎಂಡಿ ಕಚೇರಿಯ ಮೇಲೆ ದಾಳಿ ನಡೆಸಿ 1 ಇನ್ನೋವಾ ಕಾರು ಮತ್ತು 1 ಜೀಪು, 20 ಕುರ್ಚಿಗಳು ಮತ್ತು 22 ಟೇಬಲ್‌ಗಳು, 10 ಕಂಪ್ಯೂಟರ್‌ಗಳು ಸೇರಿದಂತೆ ಇತರ ಕಚೇರಿ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *