ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆ ನೇಮಕಾತಿಗೆ ಮಹತ್ವದ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನ ಕೇಂದ್ರ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದೆ, ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಒಪ್ಪಂದದ ಆಧಾರದ ಮೇಲೆ ಎರಡು ವರ್ಷಗಳ ಪ್ರಾಥಮಿಕ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲಾಗಿದೆ.
ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ, ಅರ್ಹ ಮತ್ತು ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ http://kfwccf.in ಮೂಲಕ ಡೌನ್ಲೋಡ್ ಮಾಡಿ ಭರ್ತಿ ಮಾಡಬಹುದು.
ಅರ್ಜಿಯನ್ನು ಫೆಬ್ರವರಿ 25 ರೊಳಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ನೇಮಕಾತಿ ಪ್ರಕ್ರಿಯೆ, ಅರ್ಜಿ ವಿಧಾನ ಮತ್ತು ಸೇವಾ ನಿಯಮಗಳ ಕುರಿತು ಹೆಚ್ಚಿನ ವಿವರಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅರಣ್ಯ ಮತ್ತು ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೆ ಇದು ಮಹತ್ವದ ವೃತ್ತಿ ಅವಕಾಶವಾಗಿದೆ.
ನಮೂನೆ ಮತ್ತು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: KFWCCF ಗೆ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಹುದ್ದೆಗೆ ಅಧಿಸೂಚನೆ
ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 4:26 pm, ಗುರುವಾರ, 19 ಫೆಬ್ರವರಿ 26