Carrying liquor in Bangalore Metro ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರು ಮದ್ಯದ ಬಾಟಲಿ ಸಾಗಿಸಲು ಅನುಮತಿ? | Bmrc May Soon Allow Commuters To Carry Liquor Bottles In Metro

Carrying liquor in Bangalore Metro ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರು ಮದ್ಯದ ಬಾಟಲಿ ಸಾಗಿಸಲು ಅನುಮತಿ? | Bmrc May Soon Allow Commuters To Carry Liquor Bottles In Metro


ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ನಮ್ಮ ಮೆಟ್ರೋದಲ್ಲಿ ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಸಾಗಿಸಲು ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದೆ. ದೆಹಲಿ ಮೆಟ್ರೋ ಮಾದರಿಯಲ್ಲಿ, ವಿಮಾನ ನಿಲ್ದಾಣ ಸಂಪರ್ಕಿಸುವ ನೀಲಿ ಮಾರ್ಗದಲ್ಲಿ ಈ ನಿಯಮವನ್ನು ಜಾರಿಗೆ ತರಲು ಚಿಂತನೆ?

 ಬೆಂಗಳೂರು (ಫೆ.20) ಬೆಂಗಳೂರು ಮೆಟ್ರೋ ರೈಲು ನಿಗಮವು ಮೆಟ್ರೋ ಪ್ರಯಾಣಿಕರಿಗೆ ರೈಲಿನಲ್ಲಿ ಮದ್ಯದ ಬಾಟಲಿಗಳನ್ನು (ಸೀಲ್ಡ್‌) ಕೊಂಡೊಯ್ಯಲು ಅನುಮತಿ ನೀಡುವ ಕುರಿತು ಚಿಂತನೆ ನಡೆಸಿದೆ.

ಪ್ರಸ್ತುತ ದೆಹಲಿ ಮೆಟ್ರೋದ ಏರ್‌ಪೋರ್ಟ್ ಮಾರ್ಗದಲ್ಲಿ ಮದ್ಯ ಕೊಂಡೊಯ್ಯಲು ಅನುಮತಿ ಇದೆ. ಅದೇ ರೀತಿ ನಮ್ಮ ಮೆಟ್ರೋದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ನೀಲಿಮಾರ್ಗ ಆರಂಭದ ಬಳಿಕ ಮುಂದಿನ ಎರಡು ವರ್ಷಗಳಲ್ಲಿ, ಮದ್ಯವನ್ನು ತೆಗೆದುಕೊಂಡು ಹೋಗಲು ಅನುಮತಿ ನೀಡಲಿದೆ ಎಂದು ಮೂಲವೊಂದು ತಿಳಿಸಿದೆ.

ಇದನ್ನೂ ಓದಿ:Apollo Robotic knee replacement for teens: 17ರ ಬಾಲಕನಿಗೆ ಯಶಸ್ವಿಯಾಗಿ ರೋಬೊಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಮಾಡಿದ ಅಪೋಲೋ!

ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕವಾಗಿ ಅನುಮೋದನೆ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು. ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ವಿಶೇಷ ಪರವಾನಗಿ ಅಥವಾ ಪ್ರತ್ಯೇಕ ಅನುಮತಿ ಅಗತ್ಯವಿಲ್ಲ. ಅನುಮೋದನೆಯಾದ ಬಳಿಕ ಈ ನಿಯಮವನ್ನು ಮೆಟ್ರೋ ನಿಯಮಾವಳಿಗಳಲ್ಲಿ ಸೇರಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿವೆ.

YouTube video player



Source link

Leave a Reply

Your email address will not be published. Required fields are marked *