ರಾಜ್ಯದಲ್ಲಿ ಏಪ್ರಿಲಿಂದ ಎಸ್‌ಐಆರ್ ಆರಂಭ? ಮತಪಟ್ಟಿ ವಿಶೇಷ ಪರಿಷ್ಕರಣೆಗೆ ಆಯೋಗ ಸಜ್ಜು | Voter List Special Intensive Revision Likely In Karnataka From April Election Commission Signals Kvn

ಬಿಹಾರ ಮತ್ತು ಪಶ್ಚಿಮ ಬಂಗಾಳದ ನಂತರ, ಕರ್ನಾಟಕದಲ್ಲೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಏಪ್ರಿಲ್‌ನಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ, 2025ರ ಮತದಾರರ ಪಟ್ಟಿಯನ್ನು 2002ರ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡುವ ಕಾರ್ಯಗಳು ಅಂತಿಮ ಹಂತದಲ್ಲಿವೆ.

ಬೆಂಗಳೂರು: ಬಿಹಾರ, ಪಶ್ಚಿಮ ಬಂಗಾಳ ಬಳಿಕ ಇದೀಗ ಕರ್ನಾಟಕದಲ್ಲೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಮುಂದಿನ ಏಪ್ರಿಲ್‌ನಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.

ಕೇಂದ್ರ ಚುನಾವಣಾ ಆಯೋಗ ಈ ಹಿಂದೆಯೇ ಕರ್ನಾಟಕ ಸೇರಿ ಕೆಲ ರಾಜ್ಯಗಳಿಗೆ ಎಸ್‌ಐಆರ್‌ ಸಂಬಂಧ ಪೂರ್ವ ಸಿದ್ಧತೆಗಳನ್ನು ನಡೆಸುವಂತೆ ಸೂಚಿಸಿತ್ತು. ಇದೀಗ ಆ ಪೂರ್ವ ಸಿದ್ಧತೆಗಳನ್ನು ಆದಷ್ಟು ಬೇಗ ಮುಗಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಪ್ರಕಾರ ಮುಂದಿನ ಏಪ್ರಿಲ್‌ನಲ್ಲಿ ಈ ಎಸ್‌ಐಆರ್‌ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ.

ಪೂರ್ವಭಾವಿ ಕೆಲಸ ಬಹುತೇಕ ಪೂರ್ಣ:

ಈಗಾಗಲೇ ರಾಜ್ಯದಲ್ಲಿ ಎಸ್‌ಐಆರ್‌ ಪೂರ್ವಭಾವಿ ಕೆಲಸಗಳು ಚುರುಕುಗೊಂಡಿದ್ದು ಬಹುತೇಕ ಕೊನೆಯ ಹಂತಕ್ಕೆ ತಲುಪಿವೆ. ಆಯೋಗದ ನಿರ್ದೇಶನದಂತೆ 2025ರ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್‌ ಮಾಡುವ ಪೂರ್ವಭಾವಿ ಕಾರ್ಯ ಪ್ರಗತಿಯಲ್ಲಿದೆ. ಜನವರಿ ಅಂತ್ಯದವರೆಗೆ ಶೇ.62.59ರಷ್ಟು ಮತದಾರರ ಮ್ಯಾಪಿಂಗ್‌ ಆಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕೊನೆಯದಾಗಿ 2002ರಲ್ಲಿ ಎಸ್‌ಐಆರ್ ನಡೆದಿತ್ತು

2002ರಲ್ಲಿ ರಾಜ್ಯದಲ್ಲಿ ಒಟ್ಟು 3.55 ಕೋಟಿ ಮತದಾರರು ಇದ್ದರು. 2025 ಮತದಾರರ ಪಟ್ಟಿಯಲ್ಲಿ 5.57 ಕೋಟಿ ಮತದಾರರು ಇದ್ದಾರೆ. ಈ ಪೈಕಿ ಜನವರಿ ಅಂತ್ಯದವರೆಗೆ 3.48 ಕೋಟಿ ಮತದಾರರ ಮ್ಯಾಪಿಂಗ್‌ ಆಗಿದೆ. ಉಳಿದ ಮತದಾರರ ಮ್ಯಾಪಿಂಗ್‌ ಪೂರ್ಣಗೊಳಿಸುವ ಕಾರ್ಯ ಚುರುಕುಗೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದೆ ಮುಂದಿನ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ಎಸ್‌ಐಆರ್‌ ಪ್ರಾರಂಭವಾಗಲಿದೆ.

Source link

Leave a Reply

Your email address will not be published. Required fields are marked *