
ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಪಂದ್ಯದಲ್ಲಿ ಭಾರತ ತಂಡ ಫೆಬ್ರವರಿ 22 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಸತತ ಮೂರು ಬಾರಿ ಡಕೌಟ್ ಆಗಿರುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಬದಲಿಗೆ ಸಂಜು ಸ್ಯಾಮ್ಸನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ.<img>ಟಿ20 ವಿಶ್ವಕಪ್ 2026ರಲ್ಲಿ ಟೀಂ ಇಂಡಿಯಾ ತನ್ನ ಗೆಲುವಿನ ಓಟ ಮುಂದುವರಿಸಿದೆ. ಗ್ರೂಪ್ ಹಂತದಲ್ಲಿ ಅಜೇಯವಾಗಿ ಉಳಿದು, ನೆದರ್ಲೆಂಡ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟಿದೆ. ಫೆಬ್ರವರಿ 22ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತನ್ನ ಮೊದಲ ಸೂಪರ್-8 ಪಂದ್ಯವನ್ನು ಆಡಲಿದೆ. ಆದರೆ, ಈ ಮಹತ್ವದ ಪಂದ್ಯಕ್ಕೂ ಮುನ್ನ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಫಾರ್ಮ್ ತಂಡದ ಚಿಂತೆಗೆ ಕಾರಣವಾಗಿದೆ.<img>ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಈ ವಿಶ್ವಕಪ್‌ನಲ್ಲಿ ತೀವ್ರ ಫಾರ್ಮ್ ಕೊರತೆಯಿಂದ ಬಳಲುತ್ತಿದ್ದಾರೆ. ಅಮೆರಿಕ, ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ವಿರುದ್ಧದ ಪಂದ್ಯಗಳಲ್ಲಿ ಅವರು ಸತತ ಮೂರು ಬಾರಿ ಸೊನ್ನೆಗೆ ಔಟಾಗಿದ್ದಾರೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿ ಆರ್ಯನ್ ದತ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು. ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ ಮೂರು ಪಂದ್ಯಗಳಲ್ಲಿ ಡಕೌಟ್ ಆದ ಮೊದಲ ಭಾರತೀಯ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.<img>ಅಭಿಷೇಕ್ ಶರ್ಮಾ ಅವರ ಸತತ ವೈಫಲ್ಯದಿಂದಾಗಿ, ಸಂಜು ಸ್ಯಾಮ್ಸನ್‌ರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬೇಕೆಂಬ ಕೂಗು ಜೋರಾಗಿದೆ. ಈ ಹಿಂದೆ ಅಭಿಷೇಕ್ ಅನಾರೋಗ್ಯದಿಂದ ಹೊರಗುಳಿದಾಗ, ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಸ್ಯಾಮ್ಸನ್‌ಗೆ ಅವಕಾಶ ಸಿಕ್ಕಿತ್ತು. ಆ ಪಂದ್ಯದಲ್ಲಿ ಸಂಜು ಕೇವಲ 8 ಎಸೆತಗಳಲ್ಲಿ 22 ರನ್ ಸಿಡಿಸಿ ಮಿಂಚಿದ್ದರು. ಅದರಲ್ಲೂ ದಕ್ಷಿಣ ಆಫ್ರಿಕಾ ವಿರುದ್ಧ ಸಂಜು ಉತ್ತಮ ದಾಖಲೆ ಹೊಂದಿದ್ದಾರೆ. ಆಡಿದ 5 ಟಿ20 ಪಂದ್ಯಗಳಲ್ಲಿ 63.25ರ ಸರಾಸರಿ ಮತ್ತು 190.22ರ ಸ್ಟ್ರೈಕ್ ರೇಟ್‌ನಲ್ಲಿ 253 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳೂ ಸೇರಿವೆ. ಈ ಅಂಕಿಅಂಶಗಳು ಆಯ್ಕೆಗಾರರನ್ನು ಮರುಚಿಂತನೆಗೆ ಹಚ್ಚಿವೆ.<img>ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ವಾಷಿಂಗ್ಟನ್ ಸುಂದರ್ ಬದಲಿಗೆ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಅಕ್ಷರ್, ಸೂಪರ್-8ರಂತಹ ದೊಡ್ಡ ಪಂದ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಇನ್ನು, ಶಿವಂ ದುಬೆ ಬೌಲಿಂಗ್‌ನಲ್ಲಿಯೂ ಮಿಂಚುತ್ತಿರುವುದರಿಂದ, ಭಾರತಕ್ಕೆ ಆರನೇ ಬೌಲಿಂಗ್ ಆಯ್ಕೆ ಲಭ್ಯವಿದೆ. ಹೀಗಾಗಿ, ರಿಂಕು ಸಿಂಗ್‌ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ತಮ್ಮ ಉತ್ತಮ ಫಾರ್ಮ್ ಮುಂದುವರಿಸುತ್ತಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್.<img><p>ಭಾರತ ಸತತ ಗೆಲುವುಗಳನ್ನು ದಾಖಲಿಸುತ್ತಿದ್ದರೂ, ಬೌಲಿಂಗ್ ವಿಭಾಗದಲ್ಲಿ ಕೊಂಚ ಅಸ್ಥಿರತೆ ಕಾಣಿಸುತ್ತಿದೆ. ವರುಣ್ ಚಕ್ರವರ್ತಿ ಹೊರತುಪಡಿಸಿ ಉಳಿದ ಬೌಲರ್‌ಗಳು ಸ್ಥಿರ ಪ್ರದರ್ಶನ ನೀಡಲು ವಿಫಲರಾಗುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ತಮ್ಮ ಅತ್ಯುತ್ತಮ ಆಟವನ್ನು ಪ್ರದರ್ಶಿಸಬೇಕಿದೆ. ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್‌ನಂತಹ ಬಲಿಷ್ಠ ತಂಡಗಳನ್ನು ಎದುರಿಸಬೇಕಾಗಿರುವುದರಿಂದ ಬೌಲರ್‌ಗಳ ಪ್ರದರ್ಶನ ನಿರ್ಣಾಯಕವಾಗಲಿದೆ. ಭಾರತವು ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದ ಬಳಿಕ ಫೆಬ್ರವರಿ 26ರಂದು ಚೆನ್ನೈನಲ್ಲಿ ಜಿಂಬಾಬ್ವೆ ವಿರುದ್ಧ ಮತ್ತು ಮಾರ್ಚ್ 1ರಂದು ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲಿದೆ.</p><img>ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ ಹನ್ನೊಂದರ ಬಳಗ: ಅಭಿಷೇಕ್ ಶರ್ಮಾ/ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
Source link
T20 World Cup 2026 ಅಭಿಷೇಕ್‌ಗೆ ಗೇಟ್‌ಪಾಸ್? ಸಂಜುಗೆ ಚಾನ್ಸ್? ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ!