ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು!
ಬೆಂಗಳೂರು, ಫೆಬ್ರವರಿ 20: ಯೆಲ್ಲೋ ಲೈನ್‌ನಲ್ಲಿ ಸಂಚರಿಸುತ್ತಿದ್ದ ಡ್ರೈವರ್ಲೆಸ್ ಮೆಟ್ರೋ (ನಮ್ಮ ಮೀಟರ್0) ರೈಲು ಹಳಿ ತಪ್ಪಿದ ಘಟನೆ ಜನವರಿ- 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ ನಿಲ್ದಾಣ ಸಾಗುತ್ತಿದ್ದ ವೇಳೆ ಮೂರನೇ ಡ್ರೈವರ್ಲೆಸ್ ರೈಲು ಹಳಿ ತಪ್ಪಿರುವುದು.
ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ ಘಟನೆ ದೊಡ್ಡ ಅನಾಹುತವಾಗುತ್ತಿತ್ತು ಎಂಬ ಆತಂಕವನ್ನು ಹೊಂದಿದೆ. ಈ ಬಿಎಂಆರ್ಸಿಎಲ್ ಆರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿ ತನಿಖೆ ಆರಂಭಿಸಿದೆ. ಆರ್.ವಿ. ರೋಡ್-ಬೊಮ್ಮಸಂದ್ರವರೆಗೆ 19.15 ಕಿಮೀ ಉದ್ದದ ಯೆಲ್ಲೋ ಲೈನ್‌ನಲ್ಲಿ ಸದ್ಯ 8 ರೈಲುಗಳಿದ್ದು, 7 ರೈಲುಗಳು ಕಾರ್ಯಾಚರಣೆಯಲ್ಲಿವೆ. 8ನೇ ರೈಲಿನ ಪರೀಕ್ಷೆ ನಡೆಯುತ್ತಿದೆ. ಯೆಲ್ಲೋ ಲೈನ್‌ಗೆ 2025ರ ಆಗಸ್ಟ್ 10 ರಂದು ನರೇಂದ್ರ ಮೋದಿ ಚಾಲನೆ ನೀಡಿದ್ದು, ಆಗಸ್ಟ್ 11 ರಿಂದ ಪ್ರಯಾಣಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ರೈಲಿನ ಸುರಕ್ಷತೆ ಕುರಿತು ಇದೀಗ ಪ್ರಶ್ನೆಗಳು ಉದ್ಭವಿಸಿವೆ.
(ಮಾಹಿತಿ ಅಪ್‌ಡೇಟ್ ಆಗುತ್ತಿದೆ)
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.