ವಾಷಿಂಗ್ಟನ್, ಫೆಬ್ರವರಿ 20: ಕಳೆದ ವರ್ಷ ಭಾರತ-ಪಾಕಿಸ್ತಾನ ದೇಶಗಳ ನಡುವಿನ ಉದ್ವಿಗ್ನತೆಯ ಸಮಯದಲ್ಲಿ 11 ದುಬಾರಿ ಜೆಟ್‌ಗಳನ್ನು ಹೊಡೆದುರುಳಿಸಲಾಯಿತು. ಆಗ ನಾನು ಎರಡೂ ದೇಶಗಳು ಯುದ್ಧ ನಿಲ್ಲಿಸದಿದ್ದರೆ ಶೇ. 200ರಷ್ಟು ಸುಂಕ ವಿಧಿಸುತ್ತೇನೆ ಎಂದು ಬೆದರಿಕೆ ಹಾಕಿದ್ದೇನೆ. ಎರಡೂ ದೇಶಗಳ ನಡುವಿನ ಸಂಘರ್ಷವನ್ನು ನಿಲ್ಲಿಸಲು ಮಧ್ಯಸ್ಥಿಕೆ ವಹಿಸಿದ್ದೆ ಎಂದು ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಒಬ್ಬ ಮಹಾನ್ ವ್ಯಕ್ತಿ” ಎಂದು ಹೊಗಳಿದ್ದಾರೆ.
ಟ್ರಂಪ್ ಈ ಹೇಳಿಕೆ ನೀಡುವ ವೇಳೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಅಲ್ಲೆ ಇದ್ದಾರೆ. ಆದರೂ ಅವರು ಈ ಹೇಳಿಕೆಯನ್ನು ಅಲ್ಲಗಳೆಯಲಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯಲಿರುವ ಯುದ್ಧವನ್ನು ನಿಲ್ಲಿಸಲು ನಾನು ವೈಯಕ್ತಿಕವಾಗಿ ಮಧ್ಯಪ್ರವೇಶಿಸಿದೆ. ಯುದ್ಧಗಳು ಉಲ್ಬಣಗೊಳ್ಳುತ್ತಿರುವ ಸಮಯದಲ್ಲಿ ಎರಡೂ ದೇಶಗಳ ನಾಯಕರೊಂದಿಗೆ ನೇರವಾಗಿ ಮಾತನಾಡಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ಈ ಹೇಳಿಕೆಯನ್ನು ಭಾರತ ಈ ಹಿಂದೆ ಸಾಕಷ್ಟು ಬಾರಿ ನಿರಾಕರಿಸಿದೆ.
ಇದನ್ನೂ ಓದಿ: ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್ ಗೆ ಗಡುವು ಕೊಟ್ಟ ಟ್ರಂಪ್
ಮೇ 2025ರಲ್ಲಿ ಭಾರತ-ಪಾಕ್ ಸಂಘರ್ಷದ ಸಮಯದಲ್ಲಿ ಯಾವುದೇ ಮೂರನೇ ವ್ಯಕ್ತಿಯಾಗಿರಲಿಲ್ಲ ಎಂದು ಭಾರತ ನಿರಂತರವಾಗಿ ಹೇಳುತ್ತಲೇ ಇದೆ. ಹಾಗೆಯೇ, ಭಾರತ ಎಷ್ಟು ಯುದ್ಧವಿಮಾನಗಳನ್ನು ಕಳೆದುಕೊಂಡಿದೆ ಎಂಬ ಬಗ್ಗೆ ಭಾರತ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೂ ಟ್ರಂಪ್ 11 ದುಬಾರಿ ಜೆಟ್‌ಗಳು ಪತನ ಎಂಬ ಹೇಳಿಕೆಯನ್ನು ನೀಡಿದೆ.
“ಆ ಯುದ್ಧವು ಬಿರುಸಾಗಿತ್ತು. ವಿಮಾನಗಳನ್ನು ಹೊಡೆದುರುಳಿಸಿದ್ದೇನೆ. ನಾನು ಅವರಿಬ್ಬರಿಗೂ ಫೋನ್ ನಡೆಸಿದ್ದೆ. ನನಗೆ ಪ್ರಧಾನಿ ಮೋದಿ ಚೆನ್ನಾಗಿ ತಿಳಿದಿದ್ದರು. ಅವರು ಆತ್ಮೀಯವಾಗಿ ಈ ಬಗ್ಗೆ ಮಾತನಾಡಿ ಮನವೊಲಿಸಿದ್ದೆ” ಎಂದು ಟ್ರಂಪ್ ಹೇಳಿದ್ದಾರೆ.
#ವೀಕ್ಷಿಸಿ | ಬೋರ್ಡ್ ಆಫ್ ಪೀಸ್ ಈವೆಂಟ್ನಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಾರೆ, “…ನಮ್ಮ ಮತ್ತು ಭಾರತದ ನಡುವಿನ ಯುದ್ಧವನ್ನು ನಿಲ್ಲಿಸಿದಾಗ ಅಧ್ಯಕ್ಷ ಟ್ರಂಪ್ 25 ಮಿಲಿಯನ್ ಜೀವಗಳನ್ನು ಉಳಿಸಿದರು ಎಂದು ಅವರು (ಪಾಕಿಸ್ತಾನ ಪ್ರಧಾನಿ) ನಮ್ಮ ಮುಖ್ಯಸ್ಥರ ಮುಂದೆ ಹೇಳಿದರು… ಆ ಯುದ್ಧವು ತೀವ್ರವಾಗಿತ್ತು. ವಿಮಾನಗಳನ್ನು ಹೊಡೆದುರುಳಿಸಲಾಯಿತು. ಮತ್ತು ನನಗೆ ಸಿಕ್ಕಿತು… pic.twitter.com/pm5eT7xjz3
– ANI (@ANI) ಫೆಬ್ರವರಿ 19, 2026
“ನಾನು ಅವರನ್ನು ಕರೆದಿದ್ದೇನೆ, ನೀವು ಈ ಸಂಘರ್ಷವನ್ನು ಈಡೇರಿಸದಿದ್ದರೆ ನಾನು ನಿಮ್ಮ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ. ನೀವು ದಾಳಿ ಮಾಡಿದರೆ ನಿಮ್ಮ ಎರಡೂ ದೇಶಗಳ ಮೇಲೆ ನಾನು ಶೇ. 200ರಷ್ಟು ಸುಂಕಗಳನ್ನು ವಿಧಿಸುತ್ತೇನೆ ಎಂದು ಹೇಳುವ ಮೂಲಕ ಎರಡೂ ದೇಶಗಳಿಗೆ ಗಂಭೀರ ಆರ್ಥಿಕ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದೇನೆ. ಇದನ್ನು ಅವರು ಒಪ್ಪುತ್ತಾರೆ” ಎಂದು ಟ್ರಂಪ್ ಹೇಳಿದ್ದಾರೆ. ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡ ನಂತರವೂ ಟ್ರಂಪ್ ಅದೇ ಹಳೆಯ ಹೇಳಿಕೆ ನೀಡುತ್ತಿರುವುದು ಭಾರತದ ಅಸಮಾಧಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಈ ಕದನವಿರಾಮದಲ್ಲಿ ಟ್ರಂಪ್ ಅವರ ಪಾತ್ರವನ್ನು ಸಾರ್ವಜನಿಕವಾಗಿ ಶ್ಲಾಘಿಸಿದ್ದಾರೆ. ಅವರ ಹಸ್ತಕ್ಷೇಪವನ್ನು ಸಮಯೋಚಿತ ಮತ್ತು ಪರಿಣಾಮಕಾರಿ ಎಂದು ಕರೆದಿದ್ದಾರೆ. ಆದರೆ ಭಾರತವು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಹೊಂದಿಲ್ಲ ಎಂದು ನಿರಾಕರಿಸಲಾಗಿದೆ. ಎರಡು ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMOs) ನಡುವಿನ ಮಾತುಕತೆಗಳ ಮೂಲಕ ದ್ವಿಪಕ್ಷೀಯವಾಗಿ ಯುದ್ಧವನ್ನು ನಿಲ್ಲಿಸಲಾಗಿದೆ ಎಂದು ಭಾರತ ಸಮರ್ಥಿಸಿಕೊಂಡಿದೆ.
2025 ರ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಕಳೆದ ವರ್ಷ ಮೇ 7 ರಂದು ಭಾರತ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 6:17 pm, ಶುಕ್ರ, 20 ಫೆಬ್ರವರಿ 26