ಕಾರವಾರ, (ಫೆಬ್ರವರಿ 20): ಉತ್ತರ ಕನ್ನಡ (ಉತ್ತರ ಕನ್ನಡ) ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ (ಅರಣ್ಯ) ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹವಿದೆ, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇಂದು (ಫೆಬ್ರವರಿ 20) ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ ಸುದ್ದಿ ತಿಳಿಯುತ್ತಿದ್ದಂತೆಯೇ ಮುಂಡಗೋಡು ಪೊಲೀಸರು ದೌಡಾಯಿಸಿದ್ದಾರೆ. ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.