ಮೇಷ ರಾಶಿ:
ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡ ಕಡಿಮೆ ಆಗುವುದು. ಮಕ್ಕಳಿಂದ ಪ್ರೀತಿಯನ್ನು ಪಡೆಯುವಿರಿ.
ವೃಷಭ ರಾಶಿ:
ಇಂದು ಸಿಗದೇ ಇರುವ ಎಷ್ಟೋ ಹಣವನ್ನು ಲೆಕ್ಕಕ್ಕೆ ಪಡೆಯುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ನಿಮ್ಮ ಪರೀಕ್ಷೆಯ ದಿನವು ಇಂದಿನ ಫಲಿತಾಂಶವೂ ನಿಮ್ಮ ವರ್ತನೆಯ ಮೇಲಿರುವುದು.
ಮಿಥುನ ರಾಶಿ:
ಆದಾಯದ ವಿಚಾರದಲ್ಲಿ ಹಿನ್ನಡೆ ಹೊಂದಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸುತ್ತದೆ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗ್ರತೆ ಇರಲಿ. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗುತ್ತದೆ.
ಕರ್ಕಾಟಕ ರಾಶಿ:
ಕುಟುಂಬ ಜೊತೆ ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಪ್ರವಾಸ ಹೋಗುವಿರಿ. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಕೊಳ್ಳುವ ಪ್ರಯತ್ನವಿರಲಿದೆ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ.
ಸಿಂಹ ರಾಶಿ:
ಮನೆಯಲ್ಲಿ ಹಬ್ಬದ ವಾತಾವರಣ ಇರಲಿದೆ ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರ ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ಎಲ್ಲಾದರೂ ನಿಮಗೆ ಬೇಕಾದ ವ್ಯವಸ್ಥೆಗಳನ್ನು ನೀವು ಮಾಡಿಕೊಳ್ಳುವಿರಿ. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದೆ ನಿಮಗೆ ಖುಷಿಯಾಗುವುದು.
ಕನ್ಯಾ ರಾಶಿ:
ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದೆ ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುತ್ತಾರೆ. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯ ಕಳೆದುಹೋಗುವುದು. ನಿಮಗೆ ಗೊತ್ತೇ ಇರುವ ಕೆಲಸವನ್ನು ನೀವು ಮಾಡಬೇಕಾದೀತು. ಎಲ್ಲದರಲ್ಲಿ ಈ ರೀತಿಯಾಗಿ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ. ಮನಶ್ಚಾಂಚಲ್ಯದಿಂದ ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲಾಗದು.
ತುಲಾ ರಾಶಿ:
ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುತ್ತಾರೆ. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಮನೆಗೆ ಅತಿಥಿಗಳು ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೆ ಇರುವವರಿಂದ ದೂರ ಉಳಿಯುವಿರಿ.
ವೃಶ್ಚಿಕ ರಾಶಿ:
ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟ ವಸ್ತು. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ದೊರೆತಿದೆ. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ.
ಧನು ರಾಶಿ:
ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡರು ಅನಂತರ ಬೇಸರಿಸುತ್ತಾರೆ. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವುದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಇಂದು ಮಾಡಿಕೊಳ್ಳುವಿರಿ. ಅಚಾತುರ್ಯದಿಂದ ಹಣ ನಷ್ಟ. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸುತ್ತಾರೆ. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿರುವ ದೈವಜ್ಞರನ್ನು ಸೂಕ್ತ ಪರಿಹಾರವನ್ನು ಪಡೆದುಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ತಿಳಿಯುವುದು.
ಮಕರ ರಾಶಿ:
ಕೋಪದ ಸಂದರ್ಭದಲ್ಲಿ ಸಮಾಧಾನವನ್ನು ತಂದುಕೊಳ್ಳುವಿರಿ. ಎಲ್ಲರ ನಡುವೆ ಸಂವಹನ ಮಾಡುವಾಗ ತಾಳ್ಮೆಯಿಂದಿರಿ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು.
ಕುಂಭ ರಾಶಿ:
ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ನಡೆಯುವುದು ಅಧಿಕವಾಗಿ ಇರುವುದು. ನಿಮಗೆ ಸ್ನೇಹಿತರು ಸುಳ್ಳು ಹೇಳುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿ ತೋರಿ ಅವರನ್ನು ಓದಿ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಿರುತ್ತದೆ ಇತರರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗಿಲ್ಲ.
ಮೀನ ರಾಶಿ:
ಯಾರದೋ ವಿವಾಹದ ಕಾರ್ಯಕ್ಕೆ ಚಾಲನೆ ಮಾಡಬೇಕಾದೀತು. ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇತರರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಹಿರಿಯ ಕುಟುಂಬದವರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿರುತ್ತದೆ. ವೃದ್ಧರ ಸೇವೆಯಲ್ಲಿ ತೊಡಗಿಸಿಕೊಳ್ಳಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ರೇವತೀ, ಯೋಗ : ಶುಭ – ಕರಣ – 6, ಭದ್ರ – 6, 6, 6. 29 pm, ಇಂದಿನ ಶುಭಾಶುಭ ಕಾಲ : ರಾಹು 09:42 – 11:10, ಯಮಗಂಡ ಕಾಲ 14:06 – 15:34, ಗುಳಿಕ ಕಾಲ 06:47 – 08:14
-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)