ಬೆಂಗಳೂರು: 10ನೇ ಸೀಸನ್ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಭರ್ಜರಿಯಾಗಿ ಸಾಗುತ್ತಿದೆ. ಇಂದಿನಿಂದ ಸೂಪರ್-8 ಪಂದ್ಯಗಳು ಆರಂಭವಾಗುತ್ತಿವೆ. ಈ ಸಂದರ್ಭದಲ್ಲಿ 3 ಟಿ20 ವಿಶ್ವಕಪ್ ಫೈನಲ್ ಆಡಿದ ಏಕೈಕ ಭಾರತೀಯ ಕ್ರಿಕೆಟಿಗ ಯಾರು ಎನ್ನುವುದನ್ನು ನೋಡೋಣ ಬನ್ನಿ.

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ 20 ತಂಡಗಳು ಪಾಲ್ಗೊಂಡಿದ್ದವು. ಇದೀಗ ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು 12 ತಂಡಗಳು ಟೂರ್ನಿಯಿಂದ ಹೊರಬಿದ್ದರೇ, ಎಂಟು ತಂಡಗಳು ಸೂಪರ್-8 ಹಂತಕ್ಕೆ ಪ್ರವೇಶ ಪಡೆದಿವೆ. ಇಂದಿನಿಂದ ಸೂಪರ್-8 ಹಂತದ ಪಂದ್ಯಗಳು ಆರಂಭವಾಗಲಿವೆ.

2007ರಿಂದ ಆರಂಭವಾದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ ಒಂಬತ್ತು ಯಶಸ್ವಿ ಆವೃತ್ತಿಗಳು ಮುಗಿದಿವೆ. 2026ರ ಟಿ20 ವಿಶ್ವಕಪ್ ಟೂರ್ನಿಯು ಹತ್ತನೇ ಆವೃತ್ತಿಯ ಚುಟುಕು ವಿಶ್ವಕಪ್ ಆಗಿದೆ. ಈ ಪೈಕಿ ಕೆಲವೇ ಕೆಲವು ಕ್ರಿಕೆಟಿಗರು ಮೂರು ಬಾರಿ ಟಿ20 ವಿಶ್ವಕಪ್ ಫೈನಲ್ ಆಡಿದ್ದಾರೆ. ಈ ಪೈಕಿ ಭಾರತದ ಓರ್ವ ಕ್ರಿಕೆಟಿಗನೂ ಮೂರು ಬಾರಿ ಟಿ20 ವಿಶ್ವಕಪ್ ಫೈನಲ್ ಆಡಿದ್ದಾರೆ.

ಹೌದು, ಮೂರು ಬಾರಿ ಟಿ20 ವಿಶ್ವಕಪ್ ಫೈನಲ್ ಆಡಿದ ಏಕೈಕ ಭಾರತೀಯ ಎನ್ನುವ ಹೆಗ್ಗಳಿಕೆ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಅಂದಹಾಗೆ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ, ಬ್ರ್ಯಾಂಡ್ ಅಂಬಾಸಿಡರ್ ಆಗಿ ಗುರುತಿಸಿಕೊಂಡಿದ್ದಾರೆ.

ರೋಹಿತ್ ಶರ್ಮಾ ಆಟಗಾರನಾಗಿ ಹಾಗೂ ನಾಯಕನಾಗಿ ಟಿ20 ವಿಶ್ವಕಪ್ ಗೆದ್ದ ಏಕೈಕ ಭಾರತೀಯ ಕ್ರಿಕೆಟಿಗ ಕೂಡಾ ಹೌದು. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಆಗ ರೋಹಿತ್ ಶರ್ಮಾ ಭಾರತ ತಂಡದಲ್ಲಿದ್ದರು.

ಇದಾದ ಬಳಿಕ ಕಳೆದ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲೇ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ದಕ್ಷಿಣ ಆಫ್ರಿಕಾ ಎದುರು ಭಾರತ ವಿರೋಚಿತ ಗೆಲುವು ಸಾಧಿಸುವ ಮೂಲಕ ದಶಕದ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

ಇನ್ನು ಇವೆರಡರ ನಡುವೆ 2014ರ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಧೋನಿ ನೇತೃತ್ವದ ಟೀಂ ಇಂಡಿಯಾ, ಫೈನಲ್ ಪ್ರವೇಶಿಸಿತ್ತು. ಆದರೆ ಶ್ರೀಲಂಕಾ ಎದುರು 6 ವಿಕೆಟ್ ಅಂತರದಲ್ಲಿ ಸೋತು ಕಪ್ ಗೆಲ್ಲುವ ಅವಕಾಶ ಕೈಚೆಲ್ಲಿತ್ತು. ಆಗ ರೋಹಿತ್ ಶರ್ಮಾ ಆರಂಭಿಕನಾಗಿ 26 ಎಸೆತಗಳಲ್ಲಿ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

ವಿರಾಟ್ ಕೊಹ್ಲಿ ಕೇವಲ ಎರಡು ಬಾರಿ(2014&2024) ಫೈನಲ್ ಆಡಿದ್ದರು. 2007ರಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದಾಗ ಕೊಹ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿರಲಿಲ್ಲ.

Source link
3 ಬಾರಿ ಟಿ20 ವಿಶ್ವಕಪ್ ಫೈನಲ್ ಆಡಿದ ಏಕೈಕ ಟೀಂ ಇಂಡಿಯಾ ಕ್ರಿಕೆಟಿಗನೀತ!