ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ

ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ


ಬೆಂಗಳೂರು, ಫೆಬ್ರವರಿ 21: ಸಿಎಂ ಆಗಿರುವುದನ್ನು ಸಹಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇದು ಸಿದ್ದರಾಮಯ್ಯ ಅವರ ಒಳಗಿನ ದುಗುಡವನ್ನು ತೋರಿಸುತ್ತದೆ. ಅಧಿಕಾರ ಶಾಶ್ವತವಲ್ಲ, ಸಿದ್ದರಾಮಯ್ಯ ಅವರು ಎಂಟು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಕೇವಲ ಕುರುಬ ಸಮುದಾಯದವರು, ಮೈಸೂರಿನ ರಾಜಕಾರಣದಲ್ಲಿ ಜಾತಿ ಭೇದ ಮರೆತು ಹಲವು ಸಮಾಜಗಳು ಅವರ ರಾಜಕೀಯ ಬೆಳವಣಿಗೆಗೆ ಶಕ್ತಿ ತುಂಬಿವೆ. ಈ ಸಾಮಾನ್ಯ ಜ್ಞಾನ ಅವರಿಗೆ ಇಲ್ವಾ ಎಂದು ಪ್ರಶ್ನಿಸಿದರು. ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಸಮಾಜದ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ನನ್ನ ಅಭಿಪ್ರಾಯ. ತಮ್ಮ ಪಕ್ಷದಲ್ಲಿ ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ, ಆದರೆ ರಾಜ್ಯದ ಜನತೆಗೆ ನಿರಾಸೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *