IND vs AUS: ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

IND vs AUS: ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ


ಪ್ರಸ್ತುತ ಭಾರತ ಮಹಿಳಾ ಪಡೆ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಮೂರು ಮಾದರಿಗಳ ಸರಣಿಯನ್ನು ಆಡಲಿದೆ. ಅದರ ಭಾಗವಾಗಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಹರ್ಮನ್ ಪ್ರೀತ್ ಕೌರ್ ಪಡೆ ಪ್ರವಾಸವನ್ನು ಸರಣಿ ಗೆಲುವಿನೊಂದಿಗೆ ಪ್ರಾರಂಭಿಸಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿದ್ದ ಭಾರತ ವನಿತಾ ಪಡೆ, ಎರಡನೇ ಸೋಲು ಕಂಡಿತ್ತು. ಆದರೆ ಮೂರನೇ ಹಾಗೂ ಸರಣಿ ನಿರ್ಧಾರಕ ಉಪನಾಯಕಿ ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಸ್ಪಿನ್ ಮ್ಯಾಜಿಕ್ ನೆರವಿನಿಂದ ಭಾರತ ತಂಡ ಮೂರನೇ ಪಂದ್ಯವನ್ನು 17 ರನ್‌ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡರು. ಈ ಆಟದ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 176 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 159 ರನ್ ಗಳಿಸಲಷ್ಟೇ ಶಕ್ತವಾಯಿತು.

ರಂದು ಪ್ರಕಟಿಸಲಾಗಿದೆ – 5:52 pm, ಶನಿ, 21 ಫೆಬ್ರವರಿ 26



Source link

Leave a Reply

Your email address will not be published. Required fields are marked *