ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (ಬಾಗಲಕೋಟೆ) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು.
ಇಬ್ಬರು ಹಿಂದೂ ಕಾರ್ಯಕರ್ತ ಬಂಧನ
ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಖಾಸಗಿ ಆಸ್ತಿಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆ ಇಬ್ಬರು ಹಿಂದು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅಶೋಕ್ ವಶಕ್ಕೆ ಪಡೆಯಲು ಬೈಕ್ ಹಿಂಬಾಲಿಸಿದಾಗ ಬಿದ್ದು ಗಾಯ ಮಾಡಿಕೊಂಡಿದ್ದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಲ್ಲು ಎಸೆಯುವ ವಿಡಿಯೋ, ಫೋಟೋ ಸಾಕ್ಷಿ ಬಂಧಿಸಿರುವ ಪೊಲೀಸರು ಸದ್ಯಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ನಿರ್ಬಂಧ
ಕಲ್ಲೆಸೆತ ಕೇಸ್ ವಿಚಾರವಾಗಿ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನಿರ್ಬಂಧ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಸಮಾಜದಲ್ಲಿ ಅಶಾಂತಿ ಹರಡಬಾರದೆಂಬ ಮುನ್ನೆಚ್ಚರಿಕೆ ಕ್ರಮ ಎಂದು ಸಬೂಬು ನೀಡಿ ಡಿಸಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿ ಇಂದಿನಿಂದ ಮಾ.21ರವರೆಗೆ ಇಬ್ಬರಿಗೂ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಮುಸ್ಲಿಮರ ಪ್ರಾರ್ಥನೆಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಇನ್ನು ನಿಷೇಧಾಜ್ಞೆ ನಡುವೆ ನವನಗರದಲ್ಲಿ ವಿರಾಟ ಹಿಂದೂ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಶೋಭಾಯಾತ್ರೆಯಲ್ಲಿ ಪುಟಾಣಿ ಮಕ್ಕಳ ಭಜನೆ ಗಮನ ಸೆಳೆಯಿತು. ಸಂಸದರು, ಮಾಜಿ ಶಾಸಕರು ಯಾತ್ರೆಯಲ್ಲಿ ಭಾಗವಹಿಸಿದ್ದರು. ಇನ್ನು ಯಾವುದೇ ಘಟನೆ ನಡೆಯದಂತೆ ಪೊಲೀಸರು ಪರೇಡ್ ಮಾಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.