ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಚಳಿ ಕಡಿಮೆಯಾಗುತ್ತಿದೆ. ಆದರೆ, ಹವಾಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ.

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಒಣಹವೆಯ ವಾತಾವರಣ ನಿರ್ಮಾಣವಾಗಿದ್ದು, ಚಳಿ ಕಡಿಮೆಯಾಗುತ್ತಿದೆ. ಬೆಂಗಳೂರಿನಲ್ಲಿಯೂ ಚಳಿಯ ಪ್ರಮಾಣ ಇಳಿಕೆಯಾಗುತ್ತಿದ್ದು, 30 ಡಿಗ್ರಿ ಸೆಲ್ಸಿಯಸ್‌ವರೆಗೂ ಬಿಸಿಲು ದಾಖಲಾಗುತ್ತಿದೆ

ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ಆದ್ರೆ ದಕ್ಷಿಣ ಒಳನಾಡು ಭಾಗದಲ್ಲಿಂದು ಲಘು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ, ಹಾವೇರಿ, ವಿಜಯನಗರ, ಬಳ್ಳಾರಿ ಭಾಗದಲ್ಲಿಯೂ ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಉತ್ತರ ಭಾಗದಲ್ಲಿಯೂ ಒಣಹವೆ ಇರಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಂಗಳೂರಿನಲ್ಲಿ ಶುಷ್ಕ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಗಳಿಲ್ಲ.

ಇದನ್ನೂ ಓದಿ: ಕಾವ್ಯಾ ಗೌಡ ಮನೆಯ ರಹಸ್ಯ: ಸಿಸಿಟಿವಿ ಹೇಳಿದ ಸತ್ಯ ಏನು? ಕ್ರೂರ ಮುಖಗಳು ಅಂತ ಹೇಳಿದ್ಯಾರಿಗೆ?

ಶನಿವಾರ ಸಂಜೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ಮತ್ತು ಮಾಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನ 1 ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ತಾಪಮಾನ ಏರಿಕೆಯಿಂದ ಸುಸ್ತಾಗಿದ್ದ ಜನರು ಮಳೆಯನ್ನು ಆನಂದಿಸಿದ್ದಾರೆ.

ಇದನ್ನೂ ಓದಿ: ಭಾರತದ ಶ್ರೀಮಂತ, ಬಡ ರಾಜ್ಯಗಳ ಪಟ್ಟಿ: ಉತ್ತರ ಪ್ರದೇಶ, ಗುಜರಾತ್, ಕರ್ನಾಟಕದ ಸ್ಥಾನವೆಷ್ಟು?

Source link
ರಾಜ್ಯದಲ್ಲಿ ಒಣಹವೆ ನಡುವೆಯೂ ಮಳೆ; ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವರುಣನ ಅಬ್ಬರ