
ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದ ಅಡೆತಡೆಗಳು ದೂರ ಆಗಲಿವೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):
ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಮಾಡಿಸಿಕೊಳ್ಳಲು ಅವಕಾಶಗಳು ಉದ್ಭವ ಆಗಲಿವೆ. ಕೆಲವು ಹಣಕಾಸಿನ ವಿಚಾರದ ನಿರ್ಧಾರಗಳು ಮುಂದಕ್ಕೆ ಹಾಕಿಕೊಳ್ಳುತ್ತವೆ. ಮೆಡಿಕಲ್ ಶಾಪ್ ನಡೆಸುತ್ತಾ ಇರುವವರು ಇದಕ್ಕೆ ಪೂರಕವಾಗಿ ಕೆಲವು ಹೊಸ ವ್ಯವಹಾರ ನಡೆಸುವ ಚಿಂತನೆ ನಡೆಸುತ್ತೀರಿ.
ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):
ಉದ್ಯೋಗ ಸ್ಥಳದಲ್ಲಿ ನೀವು ಯಾವುದನ್ನು ಕೊನೆಗೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂದು ಭಾವಿಸಿರುತ್ತೀರೋ ಅದನ್ನೇ ಆರಿಸಿಕೊಳ್ಳುವಂತೆ ಆಗಲಿದೆ. ನಾಲಗೆ ಹುಣ್ಣು, ಗಂಟಲು ನೋವಿನ ಸಮಸ್ಯೆ ಈ ದಿನ ವಿಪರೀತ ಬಾಧಿಸಬಹುದು. ಆಹಾರ ಪಥ್ಯವನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ. ಆಕಸ್ಮಿಕವಾಗಿ ನಿಮಗೆ ಸಿಗುವಂಥ ಅವಕಾಶಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಕಡೆಗೆ ಗಮನ ನೀಡಿ.
ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):
ನಿಮ್ಮ ಪಾಲಿನ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡಿದ್ದರ ಉತ್ತಮ ಫಲಿತವನ್ನು ಪಡೆದುಕೊಳ್ಳಲಾಗಿದೆ. ನಿಮ್ಮಲ್ಲಿ ಹೆಚ್ಚಿನ ಬಡ್ಡಿದರಕ್ಕೆ ತಂದಿದ್ದ ಸಾಲವನ್ನು ಹಿಂತಿರುಗಿಸಲು ಪ್ರಯತ್ನ ಮಾಡಬೇಕಾಗಿದೆ. ಮಿನರಲ್ ವಾಟರ್ ವಿತರಣೆಯ ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚು ಆಗಲಿದೆ. ಉದ್ಯೋಗ ಸ್ಥಳದಲ್ಲಿ ಸವಾಲು ಎನಿಸಿದ ಕೆಲವು ಕೆಲಸಗಳನ್ನು ನೀವಾಗಿಯೇ ಮುಂದೆ ಹೋಗಿ ವಹಿಸಿಕೊಳ್ಳುತ್ತಿದ್ದೇನೆ.
ಲೇಖನ- ಸ್ವಾತಿ ಎನ್.ಕೆ.