ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ


ಮೇಷ ರಾಶಿ:

ಮಹತ್ತ್ವದ ಯೋಜನೆಯು ಮಸುಕಾಗಿದ್ದರೆ ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಗಳನ್ನು ಭೇಟಿಯಾಗಲು ದೂರದವರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಸಂಘಟನೆಯಲ್ಲಿ ತೊಡಗುವರು. ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭದಾಯಕ. ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು.

ವೃಷಭ ರಾಶಿ:

ಕಾರ್ಯ ಮಾಡುವ ಸುಲಭದ ಉಪಾಯಗಳು ನಿಮ್ಮ ಬುದ್ಧಿಗೆ ತೋಚದೆ ಹೋಗಬಹುದು. ಒಂದಕ್ಕಿಂತ ಹೆಚ್ಚು ಕಾರ್ಯವನ್ನು ಒಮ್ಮೆಲೇ ಮಾಡುವ ಸಂದರ್ಭವು ಬರಬಹುದು. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆಯಾಗಿದೆ ಎಂದು ಅನ್ನಿಸುವುದು. ಮನಸ್ಸಿನಲ್ಲಿ ಯಾವುದೋ ಆತಂಕವು ಇರಲಿದೆ ಹೊರಹಾಕಲು ಪ್ರಯತ್ನಿಸುವಿರಿ. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಕಾರ್ಯದ ನಿಮಿತ್ತ ಓಡಾಟವು ಹೆಚ್ಚಾಗುವುದು. ಬಂಧುಗಳಿಂದ ಸಲ್ಲದ ಮಾತುಗಳನ್ನು ಕೇಳುವಿರಿ. ಆಲಸ್ಯದಿಂದ ನಿಮ್ಮ ಎಲ್ಲ ಕಾರ್ಯಗಳೂ ಉಳಿಯಬಹುದು.

ಮಿಥುನ ರಾಶಿ:

ಮನೆಯ ಖರೀದಿಗೆ ಹಣ ಒಟ್ಟಾಗುವುದು ಕಷ್ಟ. ಕಲಿಕೆಯ ಬಗ್ಗೆ ಆಸಕ್ತಿ ಉಂಟಾಗಬಹುದು. ಒಂದೇ ರೀತಿಯ ಕೆಲಸವನ್ನು ಮಾಡಿ ಬೇಸರವಾದೀತು. ಹೊಸ ವಸ್ತುಗಳನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವು ಇದ್ದು ಉತ್ಸಾಹದಿಂದ ಇರುತ್ತದೆ. ಸೌಜನ್ಯ ಮಾತನಾಡಿ, ಸಂತೋಷಪಡಿಸುವಿರಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳನ್ನು ಸ್ನೇಹಿತರು ಹೇಳುತ್ತಾರೆ.

ಕರ್ಕಾಟಕ ರಾಶಿ:

ಅತಿವೇಗದ ಮಾತು ಇತರರಿಗೆ ಸ್ಪಷ್ಟವಾಗದೇ ಹೋಗಬಹುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರಲಿವೆ ಅದಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾದೀತು. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುತ್ತದೆ. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುತ್ತದೆ. ಆದರೂ ಕಷ್ಟವಾದೀತು.

ಸಿಂಹ ರಾಶಿ:

ಆಪ್ತರ ಜೊತೆ ಮಾಡುವ ಸಮಾಲೋಚನೆಯಿಂದ ಅನೇಕ ವಿಚಾರಗಳಿಗೆ ತೆರೆಬೀಳುವುದು. ವಸ್ತುಗಳ ಖರೀದಿಗೆ ಉತ್ಸಾಹವು ಅಧಿಕವಾಗಿರಲಿದೆ. ಯಾರ ಮಾತನ್ನೂ ಕೇಳುವ ವ್ಯವಧಾನವೂ ನಿಮ್ಮಲ್ಲಿ ಇರದು. ಸಹೋದರನ ಕುಟುಂಬದಲ್ಲಿ ನಿಮ್ಮ ಮಧ್ಯಪ್ರವೇಶವು ಆಗಬೇಕಾಗಬಹುದು. ಧಾರ್ಮಿಕ ಕಾರ್ಯದಲ್ಲಿ ತೊಡಗುವಿಕೆ ಹೆಚ್ಚಿರುವುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಧಾರ್ಮಿಕ ಮುಖಂಡರಿಗೆ ಅಪವಾದ ಬರುವ ಸಾಧ್ಯತೆ ಇದೆ. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದೆ ಸ್ವಲ್ಪ ನೆಮ್ಮದಿ ಸಿಗುವುದು.

ಕನ್ಯಾ ರಾಶಿ:

ನಿಮ್ಮ ನೆಚ್ಚಿನ ವ್ಯಕ್ತಿಗಳನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ. ಮನೆಯ ಖರ್ಚನ್ನು ಕಡಿಮೆ ಮಾಡುವ ಚಿಂತನೆಯಲ್ಲಿ ಇರುವಿರಿ. ಸರಳತೆಯೇ ನಿಮ್ಮ ಪ್ರಶಂಸೆಗೆ ಕಾರಣವಾಗುವುದು. ಕೆಟ್ಟ ಆಲೋಚನೆಗಳು ಬಂದರೂ ಅದನ್ನು ದೂರ ಮಾಡಿಕೊಳ್ಳುವ ತಂತ್ರವನ್ನು ತಿಳಿಯಿರಿ. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದೆ ನಿಭಾಯಿಸುವ ಕಲೆಯನ್ನು ಕಲಿತಿದ್ದಾರೆ. ಮನಸ್ಸಿನಲ್ಲಿ ಹತಾಶೆಯ ಭಾವವು ಮತ್ತಷ್ಟು ಬರಲಿದೆ.

ತುಲಾ ರಾಶಿ:

ಚಿಂತನೆ ವಿಶಾಲವಾಗಲು ಸಣ್ಣ ತಪ್ಪುಗಳನ್ನು ಪಾಠವಾಗಿಸಿಕೊಳ್ಳಿ. ಹಿತಮಿತವಾದ ಮಾತುಗಾರಿಕೆಯಿಂದ ಎಲ್ಲರಿಗೂ ಹಿತವಾಗುವುದು. ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಮಾಡಿಕೊಳ್ಳಿ. ಸಮಯದಿಂದ ಆಗುವ ತಪ್ಪನ್ನು ಸರಿ ಮಾಡಿಕೊಳ್ಳಿರಿ. ಬೇಕಾದಷ್ಟು ಇದ್ದರೂ ಅದನ್ನು ವ್ಯಯಿಸಲು ದಾರಿ ಕಾಣದು. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು. ಬಂಧುಗಳ ಆಶ್ರಯದಲ್ಲಿ ಇಂದು ನೀವು ಇರಬೇಕಾದೀತು.

ವೃಶ್ಚಿಕ ರಾಶಿ:

ವಿವಾದಗಳಿಂದ ದೂರವಿರಬೇಕೆಂದರೂ ಅದು ನಿಮ್ಮನ್ನೇ ಬಂದು ಸೇರುವುದು. ನಿಮ್ಮ ಪ್ರಭಾವ ಹೆಚ್ಚಾಗಿ ಶತ್ರುಗಳು ದೂರ ಹೋಗುತ್ತಾರೆ ಮತ್ತು ದೀರ್ಘ ಕಾಲದಿಂದ ಬಾಕಿ ಉಳಿದಂತಹ ಯೋಜನೆ ಪೂರ್ಣಗೊಳ್ಳುವವು. ಆರ್ಥಿಕ ತೊಂದರೆಗಳನ್ನು ಹೆಚ್ಚಿಸಿಕೊಳ್ಳಿ. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುತ್ತಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು. ನಿಮ್ಮನ್ನು ಅನುಕರಣೆ ಮಾಡಬಹುದು.

ಧನು ರಾಶಿ:

ಇಂದು ಮನೆಯ ಹಿರಿಯರನ್ನು ಕಳೆದುಕೊಳ್ಳಬೇಕಾದೀತು. ವ್ಯವಹಾರದಲ್ಲಿ ಅಸಾಧ್ಯವನ್ನು ಸಾಧಿಸುವ ಛಲ ಬೇಡ. ವಿದ್ಯಾರ್ಥಿಗಳು ತಮಗೆ ಬೇಕಾದುದನ್ನು ಯಾರಿಂದಲಾದರೂ ಪಡೆಯುವರು. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಚಾಣಾಕ್ಷತೆಯಿಂದ ಲಾಭವನ್ನು ಪಡೆದುಕೊಳ್ಳಿ. ನಿಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದೆ ನಿಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ.

ಮಕರ ರಾಶಿ:

ನಿಮ್ಮ ಪ್ರೀತಿ ಮತ್ತು ವಿಶ್ವಾಸ ಭದ್ರವಾಗಿರುವುದು. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗುವುದು. ಸಹೋದರಿಯ ನಡುವೆ ವಾಗ್ವಾದ ಮಾಡುವಿರಿ. ಇಂದು ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ. ಹೊಸ ಉದ್ಯೋಗವನ್ನು ಉತ್ಸಾಹದಿಂದ ಮಾಡಿರಿ. ಬಯಸಿದ್ದನ್ನು ಪಡೆದುಕೊಳ್ಳುವ ಅರ್ಹತೆ ನಿಮಗೆ ಬರಲಿದೆ. ಶಿಸ್ತನ್ನು ಬಿಡದೆ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಶಿಸ್ತುಬದ್ಧವಾದ ವ್ಯವಹಾರದಿಂದ ನಿಮಗೆ ಹೊಗಳಿಕೆ ಸಿಗುವುದು.

ಕುಂಭ ರಾಶಿ:

ನಿಮ್ಮ ವಿವಾಹದ ಕುರಿತು ಬಂಧುಗಳಲ್ಲಿ ಚರ್ಚೆಯಾಗುವುದು. ಆಪ್ತರಿಗಾಗಿ ಸಮಯವನ್ನು ಇಡುವಿರಿ. ನಿಮಗೆ ಅನುಕೂಲಕರ ವಾತಾವರಣವನ್ನು ಸಿದ್ಧ ಮಾಡುವರು. ಪ್ರೀತಿಯಲ್ಲಿ ಇಂದು ಸಮಯ ಸರಿಯುವುದೇ ಗೊತ್ತಾಗದು. ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ. ನಿಮ್ಮ ಒರಟಾದ ಮಾತು ಇತರರಿಗೆ ಬೇಸರವನ್ನು ಕೊಡುವುದು. ವಸ್ತುಗಳ ಖರೀದಿಗೆ ಹಣವನ್ನು ಖರ್ಚು ಮಾಡಬಹುದು. ಸಾಮಾನ್ಯ ಕುಟುಂಬ ಜೀವನ.

ಮೀನ ರಾಶಿ:

ಶ್ರಮ ಮಾತ್ರ ನಿಮ್ಮದು, ಫಲವು ತಾನಾಗಿಯೇ ಬರುತ್ತದೆ. ಇಂದು ನಿಮ್ಮ ಆದಾಯವನ್ನು ಇಮ್ಮಡಿಗೊಳಿಸಬಹುದು. ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು. ಆದಾಯದ ಮೂಲವು ಬದಲಾಗಬಹುದು. ಕಾನೂನಿಗೆ ಹೆಚ್ಚಿನ ವೆಚ್ಚವಾಗಬಹುದು. ಆಸ್ತಿ ವ್ಯವಹಾರದಲ್ಲಿ ಹಿನ್ನಡೆಯಾದಂತೆ ಅನ್ನಬಹುದು. ನ್ಯೂನತೆಗಳನ್ನು ಮರೆತು ಮುಂದೆ ಇಡಬೇಕು. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಭರಣೀ, ಯೋಗ : ಬ್ರಹ್ಮ, – 6ಸ್ತೋದಯತಿ4 06 – 20 pm, ಇಂದಿನ ಶುಭಾಶುಭ ಕಾಲ : ರಾಹು 08:14 – 09:42, ಯಮಗಂಡ ಕಾಲ 11:10 – 12:38, ಗುಳಿಕ ಕಾಲ 14:06 – 15:34

-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)



Source link

Leave a Reply

Your email address will not be published. Required fields are marked *