ಆಳ್ವಾಸ್‌ ಕನ್ನಡ ಶಾಲೆ: 200 ಸೀಟು, 23 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ; ಯಾಕಿಷ್ಟು ಡಿಮ್ಯಾಂಡ್? | Moodabidri Alva S Kannada School 200 Seats Over 23 Thousand Applications Received Mrq

ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 200 ಸೀಟುಗಳಿಗೆ 23,041 ಅರ್ಜಿಗಳು ಸಲ್ಲಿಕೆಯಾಗಿದ್ದು, ರಾಜ್ಯಾದ್ಯಂತ 20,146 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದಾರೆ. 6 ರಿಂದ 9ನೇ ತರಗತಿವರೆಗಿನ ಈ ಉಚಿತ ಸನಿವಾಸ ಶಿಕ್ಷಣಕ್ಕಾಗಿ ಪ್ರತಿಷ್ಠಾನವು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ.

ಮೂಡುಬಿದಿರೆ: ಜ್ಞಾನಕಾಶಿ ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ 23,041 ಮಂದಿ ಅರ್ಜಿ ಸಲ್ಲಿಸಿದ್ದು, ಭಾನುವಾರ ನಡೆದ ಪ್ರವೇಶ ಪರೀಕ್ಷೆಗೆ 20,146 ಮಂದಿ ಹಾಜರಾಗಿದ್ದಾರೆ. ಈ ಪೈಕಿ 200 ಮಂದಿ 6ರಿಂದ 9ನೇ ತರಗತಿಗಳಿಗೆ ಆಯ್ಕೆ ಆಗುತ್ತಾರೆ. ಅರ್ಹತಾ ಪರೀಕ್ಷೆಗಳನ್ನೆಲ್ಲ ದಾಟಿ ಬರುವ ಮಕ್ಕಳಿಗೆ ಇಲ್ಲಿ ಸಂಪೂರ್ಣ ಉಚಿತ ಸನಿವಾಸ ಶುಲ್ಕ ರಹಿತ ಶಿಕ್ಷಣ ನೀಡಲಾಗುತ್ತಿದೆ.

ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2026-27ನೇ ಸಾಲಿನ 6ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ 20,146 ವಿದ್ಯಾರ್ಥಿಗಳು ಮೂಡುಬಿದಿರೆಯ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ಹಾಜರಾದರು. ರಾಜ್ಯಾದ್ಯಂತ ಹಾಗೂ ಕರ್ನಾಟಕದ ಗಡಿ ಪ್ರದೇಶ ಕೇರಳದ ಕಾಸರಗೋಡು, ಮಹಾರಾಷ್ಟ್ರದ ಗಡಿ ಪ್ರದೇಶದಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.

150 ಅಂಕಗಳಿಗೆ 2.30 ಗಂಟೆಗಳ ಕಾಲ ಪರೀಕ್ಷೆ

ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಅರ್ಜಿ ಸಲ್ಲಿಸಿದ್ದರಿಂದ 5 ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. 6 ಮತ್ತು 9ನೇ ತರಗತಿಯವರೆಗೆ ಎಲ್ಲ ಪಠ್ಯ ವಿಷಯಗಳು ಸೇರಿದಂತೆ ತಾರ್ಕಿಕ ಸಾಮರ್ಥ್ಯ ಆಧರಿತವಾಗಿ 150 ಅಂಕಗಳಿಗೆ 2.30 ಗಂಟೆಗಳ ಕಾಲ ಪರೀಕ್ಷೆ ನಡೆದಿದೆ. 

ಇದನ್ನೂ ಓದಿ: ದೇಶದ ಅತಿವೇಗದ ಮೆಟ್ರೋ ರೈಲು, ನಮೋ ಭಾರತ್‌ಗೆ ಮೋದಿ ಚಾಲನೆ

ಪ್ರತಿಯೊಬ್ಬರ ಮೇಲೂ ವಾರ್ಷಿಕ ಒಂದೂವರೆ ಲಕ್ಷದ ವೆಚ್ಚವನ್ನೇ ಗಣನೆಗೆ ತೆಗೆದುಕೊಂಡರೂ ಈವರೆಗೆ ₹140 ಕೋಟಿಗೂ ಅಧಿಕ ವೆಚ್ಚವನ್ನು ಕನ್ನಡದ ಈ ಮಕ್ಕಳಿಗಾಗಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ। ಎಂ.ಮೋಹನ ಆಳ್ವ ಭರಿಸಿದ್ದಾರೆ.

ಇದನ್ನೂ ಓದಿ: ಕಾರವಾರದ ಮನೆ ಅಂಗಳದಲ್ಲಿ 8-12 ಅಡಿಯ 6 ಹೆಬ್ಬಾವು ಪ್ರತ್ಯಕ್ಷ! ಒಂದೆಡೆ ಇಷ್ಟೊಂದು ಹಾವು ಬಂದಿದ್ಯಾಕೆ?

Source link

Leave a Reply

Your email address will not be published. Required fields are marked *