ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಎಚ್ಚರಿಕೆ
ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (ಹವಾಮಾನ ಮುನ್ಸೂಚನೆ) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ, ಇನ್ನು ಕೆಲವು ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಗೆ ತತ್ತರಿಸಲಿದೆ. ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗಲಿದೆ, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38 ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನೀವೇನು ಮಾಡಬೇಕು?
ಅಲ್ಲಿಗೆ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಸಂಚಾರ ಮಾಡುವುದು ಕಷ್ಟಕರವಾಗಿದ್ದು, ಜನರು ಏರ್ ಕೂಲರ್ ಮತ್ತು ಫ್ಯಾನ್‌ಗಳ ಸಹಾಯಕ್ಕೆ ಮೊರೆ ಹೋಗಿದ್ದಾರೆ. ಹವಾಮಾನ ಇಲಾಖೆ ಪ್ರಕಾರ, ಮಾರ್ಚ್ ಎರಡನೇ ವಾರದ ನಂತರ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಾಗುತ್ತದೆ. ಈ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಮತ್ತು ಹೈಡ್ರೇಶನ್ ಅಪಾಯದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
ಹೆಚ್ಚಾಗಿ ನೀರು, ತಂಪು ಪಾನೀಯಗಳು ಮತ್ತು ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನವನ್ನು ನಿಯಂತ್ರಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಎದುರಾಗುವ ಸೂಚನೆಗಳಿವೆ.
ಎಲ್ಲೆಲ್ಲಿ ಒಣ ಹವೆ?
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.