ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!

ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!


ಬೆಂಗಳೂರು, ಫೆಬ್ರವರಿ 23: ಬೆಂಗಳೂರು (ಬೆಂಗಳೂರು) ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗಬೇಕು ಅಂದರೆ ಬಿಎಂಟಿಸಿ ಬಸ್ (BMTC ಬಸ್) ಬೇಕು. ರಾಜಧಾನಿಯ ಗಲ್ಲಿ ಗಲ್ಲಿಗೂ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುತ್ತವೆ. ಆದರೆ ಇನ್ಮುಂದೆ ಬಿಎಂಟಿಸಿ ಬಸ್ಸುಗಳು ಬೆಂಗಳೂರು ಗ್ರಾಮಾಂತರ ಭಾಗಗಳಿಗೆ ಸಂಚಾರ ಮಾಡಲು ಸಜ್ಜಾಗಿವೆ. ಇಲ್ಲಿಯವರೆಗೆ ಬಿಎಂಟಿಸಿ ಬಸ್ಸುಗಳು 40 ಕಿಮೀ ಮಾತ್ರ ಸಂಚಾರ ನಡೆಸುತ್ತಿದೆ. ಇನ್ಮುಂದೆ ರಾಮನಗರ, ಕನಕಪುರ, ನೆಲಮಂಗಲ-ಹೊಸಕೋಟೆ, ದೇವನಹಳ್ಳಿ- ದೊಡ್ಡಬಳ್ಳಾಪುರಕ್ಕೂ ಸಂಚಾರ ಮಾಡಲಿವೆ.

ಬಿಎಂಟಿಸಿ ಹೊಸ ನಿರ್ಧಾರ ಪ್ರಯಾಣಿಕರಿಗೂ ಖುಷಿಕೊಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಟಿಸಿ ಪ್ರಯಾಣಿಕರು, ಗ್ರಾಮಾಂತರ ಭಾಗಗಳಿಗೆ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುವುದರಿಂದ ಶಾಲೆ-ಕಾಲೇಜು, ಕೆಲಸಕ್ಕೆ ಹೋಗುವವರಿಗೆ ತುಂಬಾ ಸಹಾಯ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿಯಲ್ಲಿ ಇಟಿಕ್ ಬಸ್ಸುಗಳು ಸೇರಿದಂತೆ ಒಟ್ಟು 6750 ಬಸ್ಸುಗಳಿವೆ. ಪ್ರತಿದಿನ 45 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ, ಒಂದು ದಿನಕ್ಕೆ ಬಿಎಂಟಿಸಿ ಬಸ್‌ಗಳು 13 ಲಕ್ಷ ಕಿಮೀ ಸಂಚಾರ ಮಾಡುತ್ತವೆ.

ಯಾವೆಲ್ಲ ಪ್ರದೇಶಗಳಿಗೆ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ?

ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ರಾಮನಗರಕ್ಕೆ, ಬನಶಂಕರಿ ಬಸ್ ನಿಲ್ದಾಣದಿಂದ ಕನಕಪುರಕ್ಕೆ, ಮೆಜಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಿಂದ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರಕ್ಕೆ ಬಸ್ಸುಗಳು ಸಂಚಾರ ಮಾಡಲಿವೆ.

ಪ್ರಯಾಣಿಕರ ಉಳಿತಾಯ ವೆಚ್ಚ

ಬಿಎಂಟಿಸಿಯು 80 ಕಿಮೀ ವ್ಯಾಪ್ತಿಗೆ ಸೇವೆಯನ್ನು ವಿಸ್ತರಿಸುವ ಮೂಲಕ ವಿವಿಧ ಪ್ರದೇಶಗಳು ಮತ್ತು ನಗರ ಸಂಪರ್ಕ ಗ್ರಾಮ ಮತ್ತಷ್ಟು ಬಲ ಪ್ರದೇಶಗಳು. ಉದ್ಯೋಗ, ಶಿಕ್ಷಣ ಮತ್ತು ಚಿಕಿತ್ಸಾ ಅಗತ್ಯಗಳಿಗೆ ದಿನನಿತ್ಯ ನಗರಕ್ಕೆ ಬರುವ ಪ್ರಯಾಣಿಕರಿಗೆ ಸಮಯ ಮತ್ತು ವೆಚ್ಚ ಉಳಿತಾಯಕ್ಕೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯವಿದೆ.

ಇದನ್ನೂ ಓದಿ: ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್‌ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್‌ಸಿಎಲ್

ಒಟ್ಟಿನಲ್ಲಿ, ಇಷ್ಟು ದಿನಗಳ ಕಾಲ ನಗರದೊಳಗೆ ಮಾತ್ರ ಸಂಚಾರ ನಡೆಯುತ್ತಿದೆ ಬಿಎಂಟಿಸಿ ಬಸ್ಸುಗಳು ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಗಳಿಗೆ ಸಂಚಾರ ಮಾಡುವುದರಿಂದ, ಉದ್ಯೋಗಿಗಳಿಗೆ ದೊಡ್ಡ ಮಟ್ಟದಲ್ಲಿ ಸಹಾಯವಾಗುವುದರಲ್ಲಿ ಅನುಮಾನವಿಲ್ಲ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 8:05 am, ಸೋಮ, 23 ಫೆಬ್ರವರಿ 26



Source link

Leave a Reply

Your email address will not be published. Required fields are marked *