ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?

ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?


ವಾಹನ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡಬೇಡಿ! ಯಾಕೆ ಗೊತ್ತಾ?

ಬೆಂಗಳೂರು, ಫೆಬ್ರವರಿ 23: ಸ್ನೇಹಿತರ ಬಳಿ ನಾವು ಜೀವನದ ಹಲವು ಗೌಪ್ಯ ಸಂಗತಿಗಳನ್ನು ಹಂಚಿಕೊಳ್ಳುತ್ತೇವೆ. ಅವರು ನಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂದು ನಂಬುತ್ತೇವೆ. ಹೀಗೆ ತನ್ನ ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೇ ಸೈಬರ್ ವಂಚನೆಯ (ಸೈಬರ್ ಕ್ರೈಮ್) ಖೆಡ್ಡಾದಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳತಿ ನಂಬಿದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡು ಪೇಚಿಗೆ ಸಿಲುಕಿದ್ದಾನೆ.

ತನ್ನ ಖಾತೆ ಬ್ಲಾಕ್ ಆಗಿದೆ ಎಂದು ವಿವರ ಪಡೆದಿದ್ದ ಆಯುಷ್

ಒಂದು ವರ್ಷದ ಹಿಂದೆ ವಿದ್ಯಾರ್ಥಿಗೆ ಪರಿಚಯವಾದ ಆಯುಷ್, ತನ್ನ ಅಕೌಂಟ್ ಬ್ಲಾಕ್ ಆಗಿದೆ ಎಂದು ವಿದ್ಯಾರ್ಥಿ ಬಳಿ ಆತನ ಬ್ಯಾಂಕ್ ವಿವರಗಳನ್ನು ಕೇಳಿದ್ದಾನೆ. ಆತನನ್ನು ನಂಬಿದ್ದ ವಿದ್ಯಾರ್ಥಿ ತನ್ನ ಬ್ಯಾಂಕ್ ಪಾಸ್ ಬುಕ್, ಎಟಿಎಂ ಕಾರ್ಡ್ ಹಾಗೂ ಮೊಬೈಲ್ ಸಿಮ್ ಎಲ್ಲವನ್ನೂ ಆಯುಷ್ಗೆ ನೀಡಿದ್ದಾನೆ. ಇದನ್ನೇ ಬಳಸಿಕೊಂಡ ಆಯುಷ್, ಅಕೌಂಟ್ ಮೂಲಕ ಸುಮಾರು 7 ಕೋಟಿ ರೂ. ಹಣವನ್ನು ವಿತರಿಸಿದ್ದು, ಇದೇ ವಿಚಾರದಿಂದ ಬ್ಯಾಂಕ್ ಇತ್ತೀಚೆಗೆ ವಿದ್ಯಾರ್ಥಿಯನ್ನು ಸಂಪರ್ಕಿಸಿದೆ.

ಇದನ್ನೂ ಓದಿ ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!

ನಿಮ್ಮ ಅಕೌಂಟ್ ಮೂಲಕ ಸೈಬರ್ ವಂಚನೆ ನಡೆದಿದೆ ಎಂದು ವಿದ್ಯಾರ್ಥಿಗೆ ಬ್ಯಾಂಕ್ ಮಾಹಿತಿ ನೀಡಿದ್ದು, ನಂತರ ವಿದ್ಯಾರ್ಥಿಯ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿದೆ. ಈ ವಿದ್ಯಾರ್ಥಿ ಘಟನೆಯ ಬಗ್ಗೆ ತಕ್ಷಣ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದು, ಈ ಪ್ರಕರಣದ ತನಿಖೆಯನ್ನು ಪತ್ತೆ ಮಾಡಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *