ಬೆಂಗಳೂರು, ಫೆಬ್ರವರಿ 23: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ಸಂಗತಿ ಮತ್ತೆ ಬಯಲಾಗಿದೆ. ಈ ಹಿಂದೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬುದಕ್ಕೆ ಎದುರಾಗಿದ್ದ ಕಾರಾಗೃಹದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಈ ಕಾರ್ಯಾಚರಣೆ ದೃಢಪಡಿಸಿದೆ. ಕೈದಿಗಳ ಬಳಿ ಇದ್ದ ಫೋನ್ಗಳು, ಸಿಮ್ ಕಾರ್ಡ್ಗಳು, ಚಾರ್ಜರ್ಗಳು, ಇಯರ್ಫೋನ್ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು, ಇವುಗಳಲ್ಲಿ ಹಲವನ್ನು ನಾಶಪಡಿಸಲಾಗಿದೆ. ಜೈಲಿನಲ್ಲಿರುವ ಕೆಲವು ಅಧಿಕಾರಿಗಳ ಸಹಕಾರದಿಂದಲೇ ಕೈಗಳಿಗೆ ಬೇಕಾದ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪಗಳು ಈ ಹಿಂದೆಯೂ ಕೇಳಿಬಂದಿದ್ದವು. ದರ್ಶನ್ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೈಲು ಪರಿಸ್ಥಿತಿ ಕುರಿತು ತರಾಟೆಗೆ ತೆಗೆದುಕೊಂಡರೂ, ವಾಸ್ತವದಲ್ಲಿ ಯಾವುದೇ ಸುಧಾರಣೆ ಆಗಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.