ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಹಾಗೂ ಬಿಜೆಪಿ ಕಾರ್ತಕರ್ತ ಸ್ವಾಮೀಜಿ 2.36 ನಿಮಿಷ ಮಾತನಾಡುತ್ತಿರುವ ಆಡಿಯೋವೊಂದು ವೈರಲ್ ಆಗಿದೆ.
ಇನ್ನು ಈ ಬಗ್ಗೆ ಟಿವಿ9ಗೆ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಶಾಸಕ ಡಾ.ಚಂದ್ರು ಲಮಾಣಿ ಬಗ್ಗೆ ನಾನು ಮಾತನಾಡಿದ್ದು ಸತ್ಯ. ಆಡಿಯೋದಲ್ಲಿ ಇರುವ ಧ್ವನಿ ನನ್ನದೇ ನಾನೇ ಮಾತನಾಡುತ್ತಿರುವುದು. 6 ತಿಂಗಳ ಹಿಂದೆ ಚಂದ್ರು ಲಮಾಣಿ ಬಗ್ಗೆ ಮಾತಾಡಿರೋ ಆಡಿಯೋ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮಾತಾಡಿದ್ದೆ. ಆದರೆ, ಲೋಕಾಯುಕ್ತ ದಾಳಿಗೂ ನಾನು ಮಾತಾಡಿದ ಆಡಿಯೋಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಲೋಕಾಯುಕ್ತ ಟ್ರ್ಯಾಪ್ಗೂ ನನ್ನ ಆಡಿಯೋಗೂ ಸಂಬಂಧವಿಲ್ಲ. ಬೇಕಿದ್ದರೆ ಆಡಿಯೋ ಬಗ್ಗೆ ತನಿಖೆ ನಡೆಸಲಿ. ಶಾಸಕರು ನನ್ನನ್ನು ಗ್ರಾಮದಿಂದ ಓಡಿಸಲು ಸಂಚು ರೂಪಿಸಿದ್ದರು. 18 ಲಕ್ಷ ರೂಪಾಯಿ ಖರ್ಚು ಮಾಡಿ ಮಠದಿಂದ ಸಂಪಾದಿಸಲು ಪ್ಲ್ಯಾನ್ ಮಾಡಿದ್ರು. ಇಡೀ ಕ್ಷೇತ್ರದಲ್ಲಿ ಶಾಸಕರ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ. ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಶಾಸಕ ಚಂದ್ರು ಲಮಾಣಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.