ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ


ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟಚಿತ್ರದ ಕ್ರೆಡಿಟ್ ಮೂಲ: ಗೂಗಲ್

ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದರು. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸ್ವಾಮೀಜಿ ಬಲ್ ಕಾರ್ಖಾನೆ ಶಾಶ್ವತ ಬಂದ್ ಮಾಡಿಸಡೋಟಾ ಜನಪ್ರತಿನಿಧಿಗಳಿಗೆ ಕರೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಕಾರ್ಖಾನೆ ಶಾಶ್ವತವಾಗಿ ಸ್ಥಗಿತಗೊಂಡಿಲ್ಲ. ಈ ಹಿನ್ನಲೆ ಜಂಟಿ ಕ್ರಿಯಾ ಸಮಿತಿ ಬಂದ್ ಗೆ ಕರೆ ನೀಡಿದೆ.

ಕಳೆದ 116 ದಿನಗಳಿಂದ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಪ್ರತಿಭಟನೆ ನಡೆಸಿಕೊಂಡುಬಂದಿದ್ದು, ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಗೆ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದರು. ವಕೀಲರ ಸಂಘ ಸೇರಿ ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದು, ಖಾಸಗಿ ಶಾಲೆಗಳ ಒಕ್ಕೂಟ ಸಹ ಹೋರಾಟಗಾರರ ಬೆನ್ನಿಗೆ ನಿಂತಿದೆ. ಭಾಗ್ಯನಗರದಲ್ಲಿ ಬೆಳಿಗ್ಗೆ 7 ಗಂಟೆಗೆ ಬೈಕ್, ಆಟೋ ರ‍್ಯಾಲಿ ನಡೆಯಲಿದೆ, 10 ಗಂಟೆಗೆ ಗವಿಯಿಂದ ರ್ಯಾಲಿ ಇರುತ್ತದೆ. ಗಡಿಯಾರ ಕಂಬ, ಅಶೋಕ ವೃತ್ತದ ಮೂಲಕ ನಗರಸಭೆಯ ಪ್ರತಿಭಟನಾ ಸ್ಥಳಕ್ಕೆ ತಲುಪಿ ಅದು ಅಂತ್ಯಗೊಳ್ಳಲಿದೆ. ನಗರದ ಮುಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದೆ, ಸಾಣೆಹಳ್ಳಿ, ಗದಗಿನ ತೋಂಟದಾರ್ಯ ಸಿದ್ದರಾಮ ಶ್ರೀಗಳು, ಕಬೀರಾನಂದ ಸ್ವಾಮೀಜಿಗಳು, ಪರಿಸರಕ್ಕಾಗಿ ನಾವು ಸಂಘಟನೆಯ ಎ. ಟಿ. ರಾಮಸ್ವಾಮಿ ಅವರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎಂದ ಅವರು.

ಇದನ್ನೂ ಓದಿ:

ಖಾಸಗಿ ಶಾಲೆಗಳಿಗೆ ರಜೆ, ಕೊಪ್ಪಳ ವಿವಿ ಪರೀಕ್ಷೆ ಮುಂದೂಡಿಕೆ

ಕೊಪ್ಪಳ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಶಾಲೆಗಳ ಒಕ್ಕೂಟ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊಪ್ಪಳ, ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ, ವಿವಿ ಪರೀಕ್ಷಾಂಗ ಕುಲಸಚಿವರು ನಿಗದಿಪಡಿಸಿದ್ದಾರೆ. ಹತ್ತನೇ ತರಗತಿಗೆ ನಿಗದಿಯಂತೆ ಪೂರ್ವ ಸಿದ್ಧತಾ ಪರೀಕ್ಷೆ ಉತ್ತಮ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:35 pm, ಸೋಮ, 23 ಫೆಬ್ರವರಿ 26



Source link

Leave a Reply

Your email address will not be published. Required fields are marked *