Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ


ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24 ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ರೀ ಸೇಲ್ ದೃಷ್ಟಿಯಿಂದ ಸೈಟು ಒಂದಕ್ಕೆ ಅಡ್ವಾನ್ಸ್ ನೀಡುವ ಬಗ್ಗೆ ಸ್ನೇಹಿತರ ಜೊತೆಗೂಡಿ ನಿಮ್ಮಲ್ಲಿ ಕೆಲವರು ಮಾತುಕತೆ ನಡೆಸಿದ್ದರು. ನಿಮ್ಮ ಸಲಹೆಗೆ ಸಹ ಒಪ್ಪಿಗೆ ಸೂಚಿಸಲಿದ್ದಾರೆ. ನಿಮ್ಮ ಮನೆ ಹತ್ತಿರ ಇರುವಂಥ ಗಣಪತಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಳ್ಳಿ ಅಥವಾ ಗಣಪತಿ ಅಥರ್ವಶೀರ್ಷವನ್ನು ಕೇಳಿಸಿಕೊಳ್ಳಿ. ನಿಮಗೆ ಇದರಿಂದ ಕಾಡುವ ಅಡೆತಡೆಗಳು ದೂರವಾಗಲಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಅತಿ ಬುದ್ಧಿವಂತಿಕೆಯ ನಿರ್ಧಾರಗಳನ್ನು ಈ ದಿನ ತೆಗೆದುಕೊಳ್ಳಬೇಡಿ. ಅದಕ್ಕೂ ನೀವೇನಾದರೂ ದೂರ ಪ್ರಯಾಣ ಮಾಡಬೇಕಾಗಿದೆ, ಸಂಬಂಧಿಸಿದ ಹೋಟೆಲ್ ಬುಕ್ಕಿಂಗ್, ವಿಮಾನದ ಸೀಟ್ ಬುಕ್ಕಿಂಗ್ ಮಾಡಬೇಕಾಗಿದೆ ಎಂದಾದಲ್ಲಿ ಬೇರೆಯವರಿಗೆ ಆ ಜವಾಬ್ದಾರಿಯನ್ನು ನೀಡುವುದು ಉತ್ತಮ ನಿರ್ಧಾರ ಎನಿಸಿಕೊಳ್ಳಲಿದೆ. ಸೆಕೆಂಡ್ ಹ್ಯಾಂಡ್ ಕಾರು- ಸ್ಕೂಟರ್- ಬೈಕ್ ಖರೀದಿ, ಮಾರಾಟ ಮಾಡುವ ವ್ಯವಹಾರ ನಡೆಸುತ್ತಿರುವವರಿಗೆ ಆದಾಯದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸೋದರ- ಸೋದರಿಯರ ಜೊತೆಗೆ ಆಸ್ತಿಗೆ ಸಂಬಂಧಿಸಿದ ವ್ಯಾಜ್ಯಗಳು ಅಥವಾ ಅಭಿಪ್ರಾಯ ಭೇದ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳಲು ಸೂಕ್ತ ವೇದಿಕೆ ದೊರೆಯಲಿದೆ. ನಿಮ್ಮಲ್ಲಿ ಕೆಲವರು ಪಿಎಫ್ ಸೇರಿದಂತೆ ಮತ್ಯಾವುದಾದರೂ ಉಳಿತಾಯದ ಹಣವನ್ನು ವಿಥ್ ಡ್ರಾ ಮಾಡುವ ಬಗ್ಗೆ ಆಲೋಚನೆ ಮಾಡಲಾಗಿರುತ್ತದೆ. ನಿಮಗೆ ಬರಬೇಕಾದ ಹಣದ ಬಾಕಿ ವಸೂಲಿಗೆ ಸೂಕ್ತವಾದ ದಿನ ಇದಾಗಲಿದೆ, ಈ ದಿನ ಒಂದು ಕಾಲ್ ಮಾಡಿಯಾದರೂ ವಿಚಾರಿಸಿ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *