ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​

ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​


ಧಾರವಾಡ, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಧಾರವಾಡ ಶ್ರೀನಗರ ವೃತ್ತದಲ್ಲಿ ಉದ್ಯೋಗಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ನಡೆಯಿತು. ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆಯಿತು. ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದಾರೆ. ಆದರೆ ಸಂಘಟನೆ ಹೈಕಮಾಂಡ್ ಮೊರೆ ಹೋಗಿದ್ದು, ಕೋರ್ಟ್ ಪೊಲೀಸರೊಂದಿಗೇ ಈ ಬಗ್ಗೆ ಚರ್ಚಿಸಿ ಎಂದು ತಿಳಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿದೆ. ಈ ನಡುವೆ ಇಂದು ಬಿಜೆಪಿ ಹೋರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿ ಹಿನ್ನೆಲೆ ಅವಕಾಶ ಇಲ್ಲದಿದ್ದರೂ ಯುವಕರು ಬೀದಿಗೆ ಇಳಿದಿದ್ದಾರೆ. ಜಯನಗರ ವೃತ್ತದ ಕಡೆಗೆ ಹೋಗುತ್ತಿದ್ದ ಪ್ರತಿಭಟನಾಕಾರರನ್ನು ಶ್ರೀನಗರ ವೃತ್ತದ ಬಳಿಯೇ ಪೊಲೀಸರು ತಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *