ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?, ಉದಯಪುರದಲ್ಲಿ ಫೆ.26ರಂದು ನಡೆಯಲಿರುವ ವಿವಾಹ ಮಹೋತ್ಸವಕ್ಕೆ ಯಾರೆಲ್ಲಾ ಪಾಲ್ಗೊಳ್ಳುತ್ತಿದ್ದಾರೆ, ಯಾವ ಸೆಲೆಬ್ರೆಟಿಗೆ ಆಮಂತ್ರಣ ನೀಡಲಾಗಿದೆ.

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಕಾರ್ಯಕ್ರಮಗಳು ಆರಂಭಗೊಂಡಿದೆ. ಫೆ.26ರಂದು ಉದಯಪುರದ ಐಟಿಸಿ ಮೆಮೆಂಟೋಸ್ ಹೊಟೆಲ್ನಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. ಫೆ.24ರಿಂದ ಮೆಹಂದಿ ಸೇರಿದಂತೆ ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳು ಅದ್ಧೂರಿಯಾಗಿ ಆರಂಭಗೊಂಡಿದೆ. ಇದೀಗ ಯಾರೆಲ್ಲಾ ಮದುವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಅನ್ನೋ ಚರ್ಚೆ ಶುರುವಾಗಿದೆ.

ಉದಯಪುರದಲ್ಲಿ ನಡೆಯುತ್ತಿರುವ ಮದುವೆ ಕಾರ್ಯಕ್ರಮಕ್ಕೆ ಕೆಲವೇ ಕೆಲವು ಮಂದಿಗೆ ಆಹ್ವಾನ ನೀಡಲಾಗಿದೆ. ಕುಟುಂಬಸ್ಥರು, ಆಪ್ತರು, ಗೆಳೆಯರು, ಎಲ್ಲರೂ ಸೇರಿ ಕೇವಲ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವ್ಯವಸ್ಥೆ ಮಾಡಲಾಗಿದೆ. ಮದುವೆ ಸಮಾರಂಭ ಕುಟುಂಬಸ್ಥರ ಸಮ್ಮುಖದಲ್ಲಿ ನಡೆಯಲಿದೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಹೆಚ್ಚಿನವರಿಗೆ ಆಹ್ವಾನವಿಲ್ಲ.

ಉದಯಪುರದ ಮದುವೆ ಕಾರ್ಯಕ್ರಮಕ್ಕೆ ವಿಜಯ್ ದೇವರಕೊಂಡ ಸಿನಿಮಾ ರಂಗದ ಕೆಲ ಆಪ್ತರು ಪಾಲ್ಗೊಳ್ಳುತ್ತಿದ್ದಾರೆ. ಇತ್ತ ಮದುವೆಗೆ ರಶ್ಮಿಕಾ ಮಂದಣ್ಣ ಸ್ಯಾಂಡಲ್ವುಡ್ ಸೆಲೆಬ್ರೆಟಿಗಳಿಗೆ ಆಹ್ವಾನ ನೀಡಿದ್ದಾರಾ ಅನ್ನೋ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ ಮದುವೆಗೆ ಸ್ಯಾಂಡಲ್ವುಡ್ ಸೆಲೆಬ್ರೆಟಿಗಳಿಗೆ ಆಹ್ವಾನ ನೀಡಿಲ್ಲ ಅನ್ನೋ ಮಾಹಿತಿಗಳು ಹೊರಬಿದ್ದಿದೆ.

ಉದಯಪುರದ ಐಟಿಸಿ ಹೊಟೆಲ್ನಲ್ಲಿ ಮೆಹಂದಿ, ಹಳದಿ , ಮದುವೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಒಟ್ಟು 117 ವಿಲ್ಲಾ ಬುಕ್ ಮಾಡಲಾಗಿದೆ. ಕೆಲವೇ ಕೆಲವು ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಮುಖವಾಗಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಕುಟುಂಬಸ್ಥರೇ ಪ್ರಮುಖರಾಗಿದ್ದಾರೆ.

ಇತ್ತೀಚೆಗೆ ಸ್ಯಾಂಡಲ್ವುಡ್ ನಟ ಪ್ರಮೋದ್ ಶೆಟ್ಟಿ, ರಶ್ಮಿಕಾ ಮಂದಣ್ಮ ಮದುವೆ ಕುರಿತು ಪ್ರತಿಕ್ರಿಯೆ ನೀಡಿದ್ದರು. ರಶ್ಮಿಕಾ ಮಂದಣ್ಣ ಮದುವೆಗೆ ನಮ್ಮನ್ನು ಕರೆದಿಲ್ಲ. ಕರೆದರೆ ಹೋಗುತ್ತೇವೆ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ಪ್ರಮೋದ್ ಶೆಟ್ಟಿ ಕರೆಯುವ ಸಾಧ್ಯತೆಗಳೂ ಇಲ್ಲ ಎಂದಿದ್ದಾರೆ.

ಮಾರ್ಚ್ 4ರಂದು ನಡೆಯಲಿರುವ ರೆಸೆಪ್ಶನ್ಗೆ ಹಲವು ಸೆಲೆಬ್ರೆಟಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಹೈದರಾಬಾದ್ನ ತಾಜ್ ಕೃಷ್ಣದಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ತೆಲುಗು ಸಿನಿಮಾ ಸ್ಟಾರ್ಗಳು, ಬಾಲಿವುಡ್ ಮಂದಿಗೆ ಆಹ್ವಾನ ನೀಡಲಾಗಿದೆ.ಇತ್ತ ರಶ್ಮಿಕಾ ಮಂದಣ್ಣ ರೆಸೆಪ್ಶನ್ ಕಾರ್ಯಕ್ರಮಕ್ಕೆ ಕೆಲ ಸ್ಯಾಂಡಲ್ವುಡ್ ಸೆಲೆಬ್ರೆಟಿಗಳು ಪಾಲ್ಗೊಳ್ಳು ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4ರ ರೆಸೆಪ್ಶನ್ಗೆ ಹಲವರು ಭಾಗಿ

Source link
ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?