ಬೆಂಗಳೂರು, ಫೆ.24: ಶನಿವಾರ ಬೆಳಗಿನ ಜಾವ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ (HDFC) ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಿದ್ದನು. ಆದರೆ, ಬ್ಯಾಂಕ್‌ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದೆ ಗಾಬರಿಗೊಂಡು ಏನನ್ನೂ ಕಡಿಯಲಾಗದೆ ಅಲ್ಲಿಂದ ಓಡಿಹೋಗಿದ್ದನು.
ಇದರ ನಂತರ ಆರೋಪಿಯು ಕಬ್ಬನ್‌ಪೇಟೆಯಲ್ಲಿರುವ ಹೆಚ್.ಡಿ.ಎಫ್.ಸಿ ಬ್ಯಾಂಕ್ ಎಟಿಎಂನಲ್ಲೂ ಕಳ್ಳತನ ಮಾಡಿದ್ದಾನೆ ತನಿಖೆಯಿಂದ ತನಿಖೆಗೆ ಯತ್ನಿಸಿದ್ದ. ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ದಾಖಲೆಗಳ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ಹಸನ್ ಸಾಬ್ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ, “ತನ್ನ ಮೇಲಿರುವ ಸಾಲವನ್ನು ತೀರಿಸಲು ಬೇರೆ ದಾರಿ ಕಾಣದೆ ಈ ಕಳ್ಳತನಕ್ಕೆ ಕೈ ಹಾಕಿದ್ದೆ” ಎಂದು ಆರೋಪಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಇದನ್ನೂ ಓದಿ: ಬೆಡ್ ರೂಮ್‌ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ತಪ್ಪಿಸಿಕೊಂಡ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ
ಸದ್ಯ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ, ಈ ಹಿಂದೆ ಯಾವುದಾದರೂ ಕೃತ್ಯಗಳಲ್ಲಿ ಭಾಗವಹಿಸಿದ್ದಾನೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ವರದಿ: ಪ್ರದೀಪ್ ಟಿವಿ9 ಬೆಂಗಳೂರು
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ