ಕನಿಷ್ಠ ಐವರಿಗೆ ಮಂತ್ರಿ ಸ್ಥಾನ ನೀಡಲು ಹೈಕಮಾಂಡ್‌ಗೆ ಮನವಿ – ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಪತ್ರ | Appeal To High Command To Grant Ministerial Posts To At Least Five

ಕನಿಷ್ಠ ಐವರಿಗೆ ಮಂತ್ರಿ ಸ್ಥಾನ ನೀಡಲು ಹೈಕಮಾಂಡ್‌ಗೆ ಮನವಿ – ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಪತ್ರ | Appeal To High Command To Grant Ministerial Posts To At Least Five



ಕನಿಷ್ಠ ಐವರಿಗೆ ಮಂತ್ರಿ ಸ್ಥಾನ ನೀಡಲು ಹೈಕಮಾಂಡ್‌ಗೆ ಮನವಿ – ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಪತ್ರ | Appeal To High Command To Grant Ministerial Posts To At Least Five

ಹೊಸದಾಗಿ, ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಸಹಿ ಮಾಡಿ ಹೈಮಾಂಡ್‌ಗೆ ಪತ್ರ ಬರೆದಿರುವುದು ಸತ್ಯ. ಕೆಲ ಸಚಿವರಿಗೆ ಕೆಲಸ ಮಾಡಲು ಆಸಕ್ತಿಯೇ ಇಲ್ಲ. ಕೆಲವರು ಯಾವುದಾದರೂ ಕೋಟಾದ ಮೇಲೆ ಪ್ರತಿ ಬಾರಿಯೂ ಸಚಿವರಾಗುತ್ತಲೇ ಇರುತ್ತಾರೆ. ತಮ್ಮ ಕುರ್ಚಿ ಸೇಫ್ ಆಗಿದೆ.

ಕೆ.ಎಂ.ದೊಡ್ಡಿ : ಮುಂಬರುವ ಸಚಿವ ಸಂಪುಟದಲ್ಲಿ ಮೊದಲ ಬಾರಿ ಆಯ್ಕೆಯಾಗಿರುವ ಕನಿಷ್ಠ ಐದು ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಎಂದು ಹೈಕಮಾಂಡ್ ಬಳಿ ಮನವಿ ಮಾಡಿದ್ದೇವೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಸಮೀಪದ ಮೆಣಸಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚುರುಕಾಗಿ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಆಡಳಿತ ಯಂತ್ರಕ್ಕೆ ವೇಗ ನೀಡುವ ಹೊಸಬರಿಗೆ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು.

ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಸಹಿ ಮಾಡಿ ಹೈಮಾಂಡ್‌ಗೆ ಪತ್ರ

ಹೊಸದಾಗಿ, ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೆಲ್ಲರೂ ಸಹಿ ಮಾಡಿ ಹೈಮಾಂಡ್‌ಗೆ ಪತ್ರ ಬರೆದಿರುವುದು ಸತ್ಯ. ಕೆಲ ಸಚಿವರಿಗೆ ಕೆಲಸ ಮಾಡಲು ಆಸಕ್ತಿಯೇ ಇಲ್ಲ. ಕೆಲವರು ಯಾವುದಾದರೂ ಕೋಟಾದ ಮೇಲೆ ಪ್ರತಿ ಬಾರಿಯೂ ಸಚಿವರಾಗುತ್ತಲೇ ಇರುತ್ತಾರೆ. ತಮ್ಮ ಕುರ್ಚಿ ಸೇಫ್ ಆಗಿದೆ. ಅದಕ್ಕಾಗಿ ಅವರಿಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ. ಇಂತಹವರನ್ನು ಬದಲಾಯಿಸಿ ಎಂಬುದು ನಮ್ಮ ಬೇಡಿಕೆ ಎಂದು ಪ್ರತಿಕ್ರಿಯಿಸಿದರು.

ಮುಂಬರುವ ಬಜೆಟ್‌ನಲ್ಲಿ ಜಿಲ್ಲೆ ಹಾಗೂ ಮದ್ದೂರು ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಬಳಿ ಜಿಲ್ಲೆಯ ಶಾಸಕರು ಮನವಿ ಮಾಡಿದ್ದೇವೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿದೆ ಎಂದರು.

ಶಾಸಕರು ವಿದೇಶ ಪ್ರವಾಸ ಕೈಗೊಳ್ಳವುದು ಅವರ ವೈಯಕ್ತಿಕ ವಿಚಾರ. ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಗೇರುವುದು ನಿಶ್ಚಿತ. ಕಾಂಗ್ರೆಸ್ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮದ್ದೂರು ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪ ಕೈಗೊಂಡು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಗ್ರಾಮಗಳಲ್ಲಿನ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಸಮಾಜ ಸೇವಕ ಕದಲೂರು ರವಿ, ಹಾಪ್‌ಕಾಮ್ಸ್ ನಿರ್ದೇಶಕ ಮೆಣಸಗೆರೆ ಪ್ರಕಾಶ್, ಮುಖಂಡರಾದ ಮರಿಸ್ವಾಮಿ, ಎಂ.ಆರ್.ಮಧುಸೂದನ್, ನಟರಾಜು, ರವಿ, ಎಂ.ಪಿ.ರಾಜು, ಮನು, ಕುಮಾರ, ನಂಜುಂಡಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Source link

Leave a Reply

Your email address will not be published. Required fields are marked *