ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ
ಚಿತ್ರದ ಕ್ರೆಡಿಟ್ ಮೂಲ: ಆರ್ ಅಶೋಕ ಎಕ್ಸ್ ಖಾತೆ
ಬೆಂಗಳೂರು, ಫೆಬ್ರವರಿ 25: ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್ಕಾಂಗ್ರೆಸ್ (ಕಾಂಗ್ರೆಸ್) ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ಮತ್ತು ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಸೇರಿದಂತೆ ಹಲವು ಹೋರಾಟಗಳನ್ನು ಕೇಂದ್ರವಾಗಿಸಿಕೊಂಡು ಕಾಂಗ್ರೆಸ್ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದಲ್ಲಿ ಹಲವು ಬಾರಿ ಸರ್ಕಾರಿ ಉದ್ಯೋಗಕಾಂಕ್ಷಿಗಳ ಪ್ರತಿಭಟನೆ ನಡೆದಿದ್ದು, ಖಾಲಿ ಹುದ್ದೆ ಭರ್ತಿಗಾಗಿ ರಾಜ್ಯ ಸರ್ಕಾರಿ ಒಪಿಡಿ ಬಂದ್, ಪರಿಶಿಷ್ಟ ಜಾತಿ ಸಮುದಾಯಗಳು ಹಾಗೂ ಎಸ್ಸಿ ಬಲಗೈ ಸಮುದಾಯಗಳ ಪ್ರತಿಭಟನೆ ಸೇರಿದಂತೆ ಮುಂದೆ ನಡೆಯಬೇಕಿರುವ ಹೋರಾಟಗಳ ಪಟ್ಟಿಯನ್ನೇ ನಮೂದಿಸಿರುವ ಅಶೋಕ್, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಎಂದು ಸಿಎಂ ಸಿದ್ದರಾಮಯ್ಯಗೆ ಪ್ರಶ್ನಿಸಿದ್ದಾರೆ.
ಅಶೋಕ್ ಟ್ವೀಟ್ ನಲ್ಲೇನಿದೆ?
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ; ಅರಾಜಕತೆ ಗ್ಯಾರೆಂಟಿ
“ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ!”@INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ.
❌ಧಾರವಾಡದಲ್ಲಿ ಸರ್ಕಾರಿ ಉದ್ಯೋಗಕಾಂಕ್ಷಿಗಳಿಂದ ನೇಮಕಾತಿಗೆ ಪ್ರತಿಭಟನೆ
❌ಖಾಲಿ… pic.twitter.com/TcMcbgTITD
– ಆರ್. ಅಶೋಕ (@RAshokaBJP) ಫೆಬ್ರವರಿ 25, 2026
ಇದನ್ನೂ ಓದಿ ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್ ಸ್ಫೋಟಕ ಆರೋಪ
ಕಾಂಗ್ರೆಸ್ ಆಡಳಿತವು ಭ್ರಷ್ಟತೆ ಮತ್ತು ಅರಾಜಕತೆಯಿಂದ ಕೂಡಿದೆ ಎಂದು ಆರೋಪಿಸುತ್ತಾ, ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟ ಬೇರೆ ಸಾಕ್ಷಿ ಬೇಕೆ? ಎಂದು ಪ್ರಶ್ನಿಸಿದ್ದಾರೆ. ಅವರ ಟ್ವೀಟ್‌ನಲ್ಲಿನ ಪ್ರತಿ ಹಂತದಲ್ಲಿ ಜನರ ಆಕ್ರೋಶ ಹೆಚ್ಚುತ್ತಿದೆ, ಸರ್ಕಾರವು ಜನರ ಬಗ್ಗೆ ಪ್ರತಿಕ್ರಿಯಿಸುವ ಬಗ್ಗೆ ಬೇಡಿಕೆಯಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.