Headlines

3 ವರ್ಷಗಳಲ್ಲಿ ರಾಜ್ಯ ಸರ್ಕಾರ ಭರ್ತಿ ಮಾಡಿರುವ ಉದ್ಯೋಗ 40 ಸಾವಿರವಲ್ಲ, ಕೇವಲ 8 ಸಾವಿರ?

3 ವರ್ಷಗಳಲ್ಲಿ ರಾಜ್ಯ ಸರ್ಕಾರ ಭರ್ತಿ ಮಾಡಿರುವ ಉದ್ಯೋಗ 40 ಸಾವಿರವಲ್ಲ, ಕೇವಲ 8 ಸಾವಿರ?


ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕೌಂಟರ್ಚಿತ್ರದ ಕ್ರೆಡಿಟ್ ಮೂಲ: ಗೂಗಲ್

ಬೆಂಗಳೂರು, ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಧಾರವಾಡದಲ್ಲಿ ಸಾವಿರಾರು ಉದ್ಯೋಗಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಮುಖ್ಯಮಂತ್ರಿಗಳ ಹೇಳಿಕೆ ಹಸೀ ಸುಳ್ಳು ಎಂದು ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಿಂಚಿನ ವೇಗದಲ್ಲಿ ಸಿದ್ದರಾಮಯ್ಯನವರು ಹೇಳುವ ಸುಳ್ಳಿನ ವೇಗವೇ ಹೆಚ್ಚು ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಆರೋಪವೇನು?

ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡೆದಂತೆ ಹೇಳಬೇಕು ಎಂಬ ನಾಣ್ಣುಡಿ ಇದೆ. ಆದರೆ ಸಿದ್ದರಾಮಯ್ಯ ಅವರು ಸತ್ಯದ ತಲೆಯ ಮೇಲೆ, ಸತ್ಯದ ಪೂರ್ತಿ ದೇಹದ ಮೇಲೆಯೇ ಹೊಡೆಯುವಂತಹ ಸುಳ್ಳು ಹೇಳಿದ್ದಾರೆ. ತಮ್ಮ ಕರ್ನಾಟಕ ನಿರ್ನಾಮದ ಬೋಗಸ್‌ ಗ್ಯಾರಂಟಿ ಸರ್ಕಾರದ ಈ ಅವಧಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಎಂದು ನಿನ್ನೆ ಹಸಿಹಸಿ ಸುಳ್ಳು ಹೇಳಿದ್ದರು. ಆದರೆ ಕಾಂಗ್ರೆಸ್ ಸರ್ಕಾರದ ಈ ಅವಧಿಯ ನೇಮಕಾತಿ ಸರ್ಕಾರಿ ಹುದ್ದೆಗಳು ಕೇವಲ 8,157 ಮತ್ತು ನೇಮಕಾತಿ ಪ್ರಗತಿಯಲ್ಲಿರುವ ಹುದ್ದೆಗಳು ಕೇವಲ 3,081. ಈ ಮಾಹಿತಿಯನ್ನು ಸಿದ್ದರಾಮಯ್ಯನವರೇ ಎರಡು ತಿಂಗಳ ಹಿಂದೆ ನಡೆದ ಚಳಿಗಾಲದ ಅಧಿವೇಶನದಲ್ಲಿ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ

2025ರ ಡಿಸೆಂಬರ್ 18ರಂದು ಈ ಬಗ್ಗೆ ಸತ್ಯ ಮಾಹಿತಿ ನೀಡಿದ್ದ ಸಿಎಂ 2026ರ ಫೆಬ್ರವರಿ 24ರಂದು ಸುಳ್ಳು ಹೇಳಿದ್ದಾರೆ. ಸತ್ಯ ಏನನ್ನು ತಿಳಿದಿದ್ದರೂ, ಸಿಎಂ ಹುದ್ದೆಯಲ್ಲಿ ಕುಳಿತುಕೊಂಡಿರುವುದು ಹೀಗೆ ಹಸಿಹಸಿ ಸುಳ್ಳು ಹೇಳುವುದಕ್ಕೆ ಅವರಿಗೆ ನಾಚಿಕೆಯಾಗಬೇಕು ಎಂದು ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸದನದ ಒಳಗೊಂದು ಮಾಹಿತಿ, ಹೊರಗೆ ಸುಳ್ಳಿನ ಪ್ರದರ್ಶನ ಮಾಡಿ ಇನ್ನೂ ಎಷ್ಟು ದಿನ ಜನರನ್ನು ವಂಚಿಸುವಿರಿ? ಜನರ ಮುಂದೆ, 40,000 ಹುದ್ದೆ ಭರ್ತಿ ಮಾಡಿದ್ದೇವೆ ಎಂದು ಹಸಿ ಸುಳ್ಳು ಹೇಳುವುದು ರಾಜ್ಯದ ನಿರುದ್ಯೋಗಿ ಯುವಜನತೆಗೆ ನೇರ ವಂಚನೆಯಲ್ಲವೇ? ರಾಜ್ಯದ ಅತಿ ದೀರ್ಘಾವಧಿ ಮುಖ್ಯಮಂತ್ರಿಗಳಾಗಿರುವ ತಾವೇ ಈ ರೀತಿ ರಾಜ್ಯದ ಜನತೆಯ ದಾರಿ ತಪ್ಪಿಸಿದರೆ ಹೇಗೆ? ದಯವಿಟ್ಟು ಸುಳ್ಳಿನ ಪ್ರಚಾರ ನಿಲ್ಲಿಸಿ, ಯುವಜನರ ಆಕ್ರೋಶ, ನೋವನ್ನು ಪೋಸ್ಟ್ ಮಾಡಿ. ಪರಿಸ್ಥಿತಿ ಕೈಮೀರುವ ಮುನ್ನ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ನಮ್ಮ ಯುವಜನತೆಗೆ ನ್ಯಾಯ ಒದಗಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕೌಂಟರ್ ಕೊಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *