Headlines

ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ

ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ


ಉತ್ತರ ಕನ್ನಡ, ಫೆ.25: ಎರಡು ವರ್ಷಕ್ಕೊಮ್ಮೆ ನಡೆಯುವ ನಾಡಿನ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಂದು, ನೈಋತ್ಯ ಕಾರ್ಯಕ್ರಮವು ಭಕ್ತರ ಅನುಕೂಲಕ್ಕಾಗಿ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಿದೆ. ಬೆಂಗಳೂರಿನ ಯಶವಂತಪುರ ಮತ್ತು ತಾಳಗುಪ್ಪ ನಡುವೆ ಈ ಸೇವೆ ಲಭ್ಯವಿರಲಿದೆ. ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 27 ರಂದು ಸಂಚರಿಸಲಿದೆ. ರೈಲು ಸಂಖ್ಯೆ 06587 ಫೆಬ್ರವರಿ 27 (ಶುಕ್ರವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಫೆಬ್ರವರಿ 28 ರಂದು ಮುಂಜಾನೆ 05:05ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೆ ವಾಪಸ್ ಬೆಂಗಳೂರಿಗೆ ರೈಲು ಸಂಖ್ಯೆ 06588 ಫೆಬ್ರವರಿ 28 (ಶನಿವಾರ) ಬೆಳಿಗ್ಗೆ 09:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.

ಒಟ್ಟು 20 ಬೋಗಿಗಳು (1 ಪ್ರಥಮ ದರ್ಜೆ/AC 2-ಟೈರ್, 2 AC 3-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದರ್ಜೆ ಮತ್ತು 2 ಎಸ್‌ಎಲ್‌ಆರ್) ಇರಲಿದೆ. ಇರುವ ಇರುವ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲಾಗಿದೆ. ಇನ್ನು ಮಾರ್ಚ್ ಒಂದರಿಂದ ರೈಲು ಸಂಖ್ಯೆ 16581 ಮಧ್ಯರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು ಬೆಳಿಗ್ಗೆ 09:00ಕ್ಕೆ ತಾಳಗುಪ್ಪ ತಲುಪಲಿದೆ. ಇದೇ ದಿನ ಅಂದರೆ ಮಾರ್ಚ್ 1 ರಂದು ರೈಲು ಸಂಖ್ಯೆ 16582 (ರಾತ್ರಿ 10:00ಕ್ಕೆ ತಾಳಗುಪ್ಪದಿಂದ ಹೊರಟು ಮರುದಿನ ಮುಂಜಾನೆ 04:45ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ಕನಸು ನನಸು

ಇನ್ನು ಈ ರೈಲುಗಳು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲುಗಡೆ ಇದೆ. ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನಸಂದಣಿ ಟಿಕೆಟ್ ಬುಕ್ಕಿಂಗ್ ಅನ್ನು ಮುಂಚಿತವಾಗಿಯೇ ಮಾಡಿಕೊಳ್ಳುವುದು ಉತ್ತಮ. ಐಆರ್‌ಸಿಟಿಸಿ (IRCTC) ಅಥವಾ ಕೌಂಟರ್‌ಗಳಲ್ಲಿ ಈ ರೈಲುಗಳ ಬುಕ್ಕಿಂಗ್ ಲಭ್ಯವಿರುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *