ಮಲ್ಲಿಕಾರ್ಜುನ ಮುತ್ಯಾಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಯಾದಗಿರಿ, ಫೆಬ್ರವರಿ 25: ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಿನ್ನೆಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು ಮಾಡಿದೆ. ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರಿದ್ದಾರೆ. ಮುಂದಿನ ಕ್ರಮ ಕೈಗೊಳ್ಳುವಂತೆ ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ನಿರ್ಧರಿಸಿದೆ.
ವೈರಲ್ ವಿಡಿಯೋದಲ್ಲಿ ಏನಿದೆ?
ಅಪ್ರಾಪ್ತ ಬಾಲಕಿಯೋರ್ವಳ ಕುತ್ತಿಗೆ ಹಿಡಿದು ಮಂಚದ ಮೇಲೆ ನಿಲ್ಲಿಸುವುದು ಸೇರಿದಂತೆ ಆಕೆಗೆ ಚಿವುಟುವದರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳನ್ನು ವಿಡಿಯೋದಲ್ಲಿ ದಾಖಲಿಸಲಾಗಿದೆ. ಇನ್ನು ಈ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತಡ ಮುತ್ಯಾ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಘಟನೆಯ ಬಗ್ಗೆ ಸುಮೋಟೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಅಭಿಪ್ರಾಯಗಳು ಕೇಳಿಬಂದಿವೆ. ಆ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿದೆ.
ಇದನ್ನೂ ಓದಿ: ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಾಕ್ ಕೊಟ್ಟ ಖಾಕಿ
ಯಾರೀ ಮಲ್ಲಿಕಾರ್ಜುನ ಮುತ್ಯಾ?
ಉತ್ತರ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಮಹೇಲ್ ಗ್ರಾಮದಲ್ಲಿ ವಾಸವಿರುವ 26 ವರ್ಷ ಆಸುಪಾಸಿನ ಈ ವ್ಯಕ್ತಿ ಇತ್ತೀಚಿನ ಸಾಮಾಜಿಕ ಜಾಲತಾಣಗಳ ಮೂಲಕ ಬಹಳ ಪ್ರಸಿದ್ಧಿ ಪಡೆದಿದ್ದಾರೆ. ಉತ್ತರ ಕರ್ನಾಟಕದ ಅನೇಕ ಭಕ್ತರು ಇವರನ್ನು ಅಪ್ಪಾಜಿ ಅಥವಾ ನಡೆದಾಡುವ ದೇವರು ಎಂದು ನಂಬಿ ಗೌರವಿಸುತ್ತಾರೆ. ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಮುತ್ಯಾ, ಅಪಾರ ಅನುಯಾಯಿಗಳನ್ನು ಹೊಂದಿದೆ. ಸ್ವಯಂ ಘೋಷಿತ ಈ ದೇವಮಾನವನ ವಿಡಿಯೋಗಳು ಆಗಾಗ ವೈರಲ್ ಆಗುತ್ತಲೇ ಇರುತ್ತವೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 6:32 pm, ಬುಧವಾರ, 25 ಫೆಬ್ರವರಿ 26