ಹೊರೆಯಾಗುತ್ತಿದ್ದರೂ ಗ್ಯಾರಂಟಿ ಕೊಡುತ್ತಿದ್ದೇವೆ, ಕೊಡುತ್ತೇವೆ: ಡಿಕೆಶಿ, ಸಿದ್ದರಾಮಯ್ಯ ಮಾತಿನ ಮರ್ಮ ಏನು?

ಹೊರೆಯಾಗುತ್ತಿದ್ದರೂ ಗ್ಯಾರಂಟಿ ಕೊಡುತ್ತಿದ್ದೇವೆ, ಕೊಡುತ್ತೇವೆ: ಡಿಕೆಶಿ, ಸಿದ್ದರಾಮಯ್ಯ ಮಾತಿನ ಮರ್ಮ ಏನು?


ಬೆಂಗಳೂರು, ಫೆಬ್ರವರಿ 26: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯಕ್ಕೆ ಆರ್ಥಿಕ ಹೊರೆಯಾಗಿದೆ, ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆಯೇ? ಇಬ್ಬರೂ ಆಡಿರುವ ಮಾತುಗಳು ಇದಕ್ಕೆ ಪುಷ್ಟಿ ನೀಡಿವೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದ್ದರೂ, ಜನರಿಗೆ ಆರ್ಥಿಕ ಬಲವನ್ನು ನೀಡಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತವನ್ನು ಗ್ಯಾರಂಟಿಗಳಿಗಾಗಿ ಕೊಡಲಾಗುತ್ತಿದೆ, ಅದು ಬರ್ಡನ್ ಎಂದು ಅವರು ಹೇಳಿದ್ದಾರೆ. ಹಾಗಂತ ನಾವು ಗ್ಯಾರಂಟಿಗಳಿಗೆ ಅನುದಾನ ನಿಲ್ಲಿಸಿಲ್ಲ. ಗ್ಯಾರಂಟಿ ಯೋಜನೆಗಳಿಗೆ 1.20 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಮತ್ತು ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿವೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *