ಬೆಂಗಳೂರು, ಫೆ.26: ಫೆಬ್ರವರಿ 28 ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC ಪರೀಕ್ಷೆ 2026) ಪ್ರಾರಂಭವಾಗಲಿದೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್ಸ್ಟಾಗ್ರಾಮ್ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್ ಎಷ್ಟು ಅಂತ ಆಮೇಲೆ ಹೇಳ್ತಿನಿ” ಎಂದು ಈ ಕಿಡಿಗೇಡಿ ಬರೆದುಕೊಂಡಿದ್ದಾನೆ. ಇದೀಗ ಘಟನೆಯಿಂದ ಭಯ ಹುಟ್ಟಿಸಿದೆ. ಹಾಗೂ ಪರೀಕ್ಷಾ ಮಂಡಳಿಯ ಕೂಡ ಆತಂಕಕ್ಕೆ ಕಾರಣವಾಗಿದೆ.
ಈ ಪೋಸ್ಟ್ ವೈರಲ್ ಆಗುತ್ತಿದೆ, ಕಷ್ಟಪಟ್ಟು ಓದುತ್ತಿರುವ ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಬಹುದೇ ಎಂಬ ಭಯವಿದೆ. ಆದರೆ, ಈ ಕಿಡಿಗೇಡಿ ಯಾವ ವಿಷಯದ ಪ್ರಶ್ನೆ ಪತ್ರಿಕೆ ಎಂಬ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಪರೀಕ್ಷೆಯ ಸಮಯದಲ್ಲಿ ಇಂತಹ ಕಿಡಿಗೇಡಿಗಳು ಹಣ ಮಾಡುವ ಉದ್ದೇಶದಿಂದ ಹಳೆಯ ಪ್ರಶ್ನೆ ಪತ್ರಿಕೆಗಳು ಅಥವಾ ನಕಲಿ ಪತ್ರಿಕೆಗಳನ್ನು ನೀಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಸಾಧ್ಯತೆ ಹೆಚ್ಚು. ಇಂತಹ ಜಾಲಗಳಿಗೆ ಸಿಲುಕಿ ಹಣ ಕಳೆದುಕೊಳ್ಳಬೇಡಿ ಮತ್ತು ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಇಲಾಖೆ ಹೇಳಿದೆ.
ಇದನ್ನೂ ಓದಿ: GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ
ಇನ್ನು ಇಂತಹ ಅನೇಕ ಘಟನೆಗಳು ಕಂಡು ಬರುತ್ತಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಅಧಿಕಾರಿಗಳಿಗೆ ದೊಡ್ಡ ಸಂಸ್ಥೆ ನೀಡಿತ್ತು. ಜನವರಿ 6, 2026 ರಂದು ಗಣಿತ ಪರೀಕ್ಷೆ ನಡೆಯುತ್ತಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ಶಿವಮೊಗ್ಗ ಕಾಲೇಜುಗಳಿಗೆ ನೀಡಲಾಗಿದ್ದ ಪ್ರಶ್ನೆ ಪತ್ರಿಕೆಯ ಪರೀಕ್ಷೆ ಆರಂಭವಾದ ಮೊದಲೇ ವಾಟ್ಸಾಪ್ ಮೂಲಕ ಹರಿದಾಡಿತ್ತು. ಶಿವಮೊಗ್ಗದ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು (DDPUE) ಕಾಲೇಜುಗಳಿಗೆ ಭೇಟಿ ನೀಡಿದಾಗ ಈ ವಿಚಾರ ಗೊತ್ತಾಗಿದೆ. ಶಿವಮೊಗ್ಗ ಜಿಲ್ಲೆಯ ಕೋಡ್ ಹೊಂದಿದ್ದ ಪ್ರಶ್ನೆ ಪತ್ರಿಕೆಯು ತುಮಕೂರು ಜಿಲ್ಲೆಯಲ್ಲಿ ಚಲವಣೆಯಲ್ಲಿರುವುದು ಕಂಡುಬಂದಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಗೆ ಅಧಿಕೃತ ದೂರು ದಾಖಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ